ಬೆಂಗಳೂರು: ತಾಯಂದಿರ ಎದೆಹಾಲು ಸಂಗ್ರಹಣೆ ಹಾಗೂ ಮಾರಾಟ ಚಟುವಟಿಕೆಗಳನ್ನು ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಆದೇಶ ಹೊರಡಿಸಿದೆ.
ಆಹಾರ ಸುರಕ್ಷತೆ & ಪ್ರಮಾಣ ಕಾಯ್ದೆ 2006ರ ಅಡಿಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮಹಿಳೆಯ ಹಾಲು & ಅದರಿಂದ ತಯಾರಿಸಲಾಗುವ ಉತ್ಪನ್ನಗಳ ವಾಣಿಜ್ಯಕರಣಗೊಳಿಸುವುದು ಇತ್ಯಾದಿ ಸಂಬಂಧಿತ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ಹೇಳಿದೆ.
ತಾಯಿಯ ಎದೆಹಾಲನ್ನು ಮಾರಾಟ ಮಾಡಿದರೆ, ಶಿಶುಗಳ ಆರೋಗ್ಯ ಮತ್ತು ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರಲಿದೆ. ಆದ್ದರಿಂದ, ತಾಯಂದಿರ ಎದೆಹಾಲು ಸಂಗ್ರಹಿಸುವ ಹಾಗೂ ಮಾರಾಟ ಇತ್ಯಾದಿ ಸಂಬಂಧಿತ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ವರದಿ ಮಾಡಿದೆ.
ಕೆಲ ಖಾಸಗಿ ಸಂಸ್ಥೆಗಳು ಗ್ರಾಮಾಂತರ ಪ್ರದೇಶಗಳಲ್ಲಿ ತಾಯಂದಿರಿಗೆ ಹಣ ನೀಡಿ ಎದೆಹಾಲು ಸಂಗ್ರಹಿಸಿ, ನಂತರ ಅದನ್ನು ಪೌಡರ್ ರೂಪದಲ್ಲಿ ದೇಶದಾದ್ಯಂತ ಮಾರಾಟ ಮಾಡುತ್ತಿವೆ. ತಾಯಂದಿರ ಎದೆಹಾಲನ್ನು ನವಜಾತ ಶಿಶುಗಳಿಗೆ ಉಣಿಸಲು ಮಾತ್ರವೇ ಬಳಸಬಹುದು. ಯಾವುದೇ ಕಾರಣಕ್ಕೂ ವಾಣಿಜ್ಯ ಉದ್ದೇಶಕ್ಕೆ ಬಳಸಬಾರದುಎಂದು ಭಾರತೀಯ ಆಹಾರ ಸುರಕ್ಷತೆ & ಪ್ರಮಾಣ ಪ್ರಾಧಿಕಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296