ಮಧ್ಯಪ್ರದೇಶ: ಮಹಿಳೆಯೊಬ್ಬರು ತನ್ನ ಪತಿ ಮತ್ತು ಸೋದರ ಮಾವನನ್ನು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಗುಂಡಿಕ್ಕಿ ಕೊಂದಿದ್ದಾರೆ. ಸೋಮವಾರ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದೆ. ನಂತರ ಅಪರಾಧಕ್ಕೆ ಬಳಸಿದ ಪಿಸ್ತೂಲ್ ನೊಂದಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರನ್ನು ಆರೋಪಿ ಸವಿತಾ ಅವರ ಪತಿ ರಾಧೇಶ್ಯಾಮ್(41), ಮತ್ತು ಆಕೆಯ ಸೋದರ ಮಾವ ಧೀರಜ್(47) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
“ರಾಧೇಶ್ಯಾಮ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಧೀರಜ್ ಬದ್ ನಗರ ಆಸ್ಪತ್ರೆಯಲ್ಲಿ ಗುಂಡೇಟಿನ ಗಾಯದಿಂದ ಮೃತಪಟ್ಟಿದ್ದಾರೆ. ನಂತರ ಆರೋಪಿ ಪಿಸ್ತೂಲ್ ನೊಂದಿಗೆ ಶರಣಾಗಿದ್ದಾರೆ ಎಂದು ಇಂಗೋರಿಯಾ ಪೊಲೀಸ್ ಠಾಣೆಯ ಉಸ್ತುವಾರಿ ಚಂದ್ರಿಕಾ ಸಿಂಗ್ ಯಾದವ್ ಹೇಳಿದರು.


