ಹಾವೇರಿ: ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಶುರುವಾದ ಜಗಳ ಸಹೋದರನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ನಾಗರಾಜ ಕೋಟಿಗಾಳರ(36) ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.
ಆಸ್ತಿ ಮಾರಾಟದ ವಿಚಾರಕ್ಕೆ ಅಣ್ಣ ತಮ್ಮಂದಿರ ನಡುವೆ ಜಗಳವಾಗಿತ್ತು. ಈ ಘಟನೆಯಿಂದ ನಾಗರಾಜ ಬೇಸತ್ತಿದ್ದು, ಸಾಲ ತೀರಿಸಲಾಗದೆ ಸಾಲದ ಸುಳಿಗೆ ಸಿಲುಕಿದ್ದ ನಾಗರಾಜ ನೇಣು ಹಾಕಿಕೊಂಡಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಒಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ರಾಣೆಬೇನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296