ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಶೇ.5ರಷ್ಟು ರಿಯಾಯಿತಿ ತೆರಿಗೆ ಪಾವತಿ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.
ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸಲು ಕಳೆದ ಏಪ್ರಿಲ್ 1 ರಿಂದ 30ರವರೆಗೆ ಮಾತ್ರ ಕಲ್ಪಿಸಲಾಗಿದ್ದ ಶೇ.5ರಷ್ಟು ರಿಯಾಯಿತಿ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದ್ದು, ಜೂನ್ 30ರೊಳಗೆ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ಲಭ್ಯವಾಗಲಿದೆ. ಮಹಾ ನಗರಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರು ಈ ಸದಾವಕಾಶದ ಪ್ರಯೋಜನ ಪಡೆಯಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————