ಬೆಂಗಳೂರು: ವಿಧಾನಸೌಧದಲ್ಲಿ ನಾಯಿಗಳ ರಕ್ಷಣೆ ಸಂಬಂಧ ಸರ್ಕಾರಕ್ಕೆ ವಿವರವಾದ ಮಾಹಿತಿ ಜೊತೆಗೆ ಪ್ರಸ್ತಾವನೆ ಕಳಿಸಿದ್ದೇವೆ. ಸರ್ಕಾರ ನಮಗೆ ಅನುಮತಿ ಕೊಟ್ಟರೆ ನಾಯಿಗಳಿಗೆ ಪ್ರತ್ಯೇಕ ನಿರ್ವಹಣೆ ಮಾಡೋ ಬಗ್ಗೆ ತೀರ್ಮಾನ ಮಾಡುವುದಾಗಿ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿ 53 ನಾಯಿಗಳು ಇವೆ. ನಾಯಿಗಳು ವಿಧಾನಸೌಧದ ಒಳಗೆ ಬಾರದಂತೆ ತಡೆಯಲು ಗೇಟ್ ವ್ಯವಸ್ಥೆ ಇಲ್ಲ. ಶಾಸಕರು ವಾಕಿಂಗ್ ಮಾಡಬೇಕಾದ್ರೆ, ಜನರು ವಿಸಿಟ್ ಮಾಡಿದಾಗ ತೊಂದರೆ ಆಗ್ತಿದೆ. ಹೀಗಾಗಿ ನಾವು ಅವುಗಳ ರಕ್ಷಣೆಗೆ ಶೆಡ್ ನಿರ್ಮಾಣ ಮಾಡೋ ಪ್ಲ್ಯಾನ್ ಇದೆ ಎಂದಿದ್ದಾರೆ.
ಖಾಸಗಿ ಎಸ್ ಜಿಒಗೆ ಕೊಟ್ಟು ಇವುಗಳಲ್ಲಿ ಸಾಕುವ ವ್ಯವಸ್ಥೆ ಮಾಡುವ ತೀರ್ಮಾನವಾಗಿ ಚರ್ಚೆ ಆಗಿವೆ. ನಾಯಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನ ಸರ್ಕಾರಕ್ಕೆ ರವಾನೆ ಮಾಡಿದ್ದೇವೆ. ಸರ್ಕಾರ ಅದಕ್ಕೆ ಒಪ್ಪಿಗೆ ಕೊಟ್ಟರೆ ಅನುಷ್ಟಾನ ಮಾಡ್ತೇವೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC