ಬೆಂಗಳೂರಿನಲ್ಲಿ ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಪೊಲೀಸರು ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಮೇಲೆ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಒಟ್ಟು 44 ಮಹಿಳೆಯರ ರಕ್ಷಣೆ ಮಾಡಲಾಗಿದ್ದು, 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಸ್ಪಾ ನಡೆಸುತ್ತಿದ್ದ ಆರೋಪಿ ಅನಿಲ್ ನನ್ನು ಬಂಧಿಸಲಾಗಿದ್ದು, ಸದ್ಯ ಈ ಘಟನೆ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


