ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಯಲಂಹಕದ ರೋರಾ ಲಕ್ಸುರಿ ಥಾಯ್ ಸ್ಪಾ ಮೇಲೆ ಪೊಲೀಸರು ದಾಳಿ ಮಾಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.
ಏಳು ಮಂದಿ ವಿದೇಶಿ ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಯಲಹಂಕ ಉಪ ನಗರದ ಬಿ ಸೆಕ್ಟರ್ ನಲ್ಲಿರುವ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಥಾಯ್ಲೆಂಡ್ ದೇಶದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿರುವುದು ಗೊತ್ತಾಗಿದೆ. ಟೂರಿಸ್ಟ್ ವೀಸಾ ಹಾಗೂ ಬಿಸ್ನೆಸ್ ವೀಸಾ ಮೂಲಕ ಆರೋಪಿಗಳು ಮಹಿಳೆಯರನ್ನು ಕರೆ ತಂದಿರುವುದು ತನಿಖೆಯಲ್ಲಿ ಬಯಲಾಗಿದೆ. ಆಂಜನೇಯ ಗೌಡ, ಆಂಜನೇಯ ರೆಡ್ಡಿ ಹಾಗೂ ಹರೀಶ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


