ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ನೀಡಿರುವ ಮೊಬೈಲ್‌ಗಳನ್ನು ಜುಲೈ 10ರಂದು ವಾಪಸ್ ಮಾಡುವ ಮೂಲಕ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಾಗುವುದು’ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮಿ ತಿಳಿಸಿದರು.
ಮಂಗಳವಾರ ನಡೆದ ಅಂಗನವಾಡಿ ನೌಕರರ ಕೌನ್ಸಿಲ್ ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸರ್ಕಾರ ನೀಡಿರುವ ಮೊಬೈಲ್‌ಗಳಲ್ಲಿ ನೆಟ್‌ವರ್ಕ್, ರಾಮ್, ಸ್ಟೋರೇಜ್ ಸಮಸ್ಯೆ ಇದೆ. ಹೊಸ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶವಿಲ್ಲ’ ಎಂದು ದೂರಿದರು.
ಪೋಷಣ್ ಅಭಿಯಾನ ಯೋಜನೆ ಅಡಿಯಲ್ಲಿ ಪೋಷಣ್ ಟ್ರ್ಯಾಕರ್‌ನಲ್ಲಿ ಪ್ರತಿನಿತ್ಯ ಮಕ್ಕಳ, ಪೋಷಕರ ಹಾಜರಾತಿ, ಆಹಾರ ವಿತರಣೆ, ಶಾಲಾಪೂರ್ವ ಶಿಕ್ಷಣ ಚಟುವಟಿಕೆಗಳನ್ನು ಅಪ್‌ಲೋಡ್ ಮಾಡುವುದಕ್ಕೆ ಸಮಸ್ಯೆಯಾಗುತ್ತಿದೆ’ ಎಂದು ಹೇಳಿದರು.
ಈಗಾಗಲೇ ನಾಲ್ಕು ವರ್ಷಗಳ ಹಿಂದೆ ನೀಡಿರುವ ಮೊಬೈಲ್ ಗಳು ಹಾಳಾಗಿವೆ. ಆದ್ದರಿಂದ, ಆರೋಗ್ಯ ಸಮೀಕ್ಷೆ ಕೈಗೊಳ್ಳಲು ಹೊಸ ಮೊಬೈಲ್ ಗಳನ್ನು ನೀಡಬೇಕು. ಇಲ್ಲವಾದರೆ, ಕೈಪಿಡಿಯಲ್ಲಿ ದಾಖಲಿಸಲು ಅವಕಾಶ ನೀಡಬೇಕು. ಹಿಂದಿನ ಬಜೆಟ್‌ನಲ್ಲಿ ಘೋಷಿಸಿರುವ 11 ಸಾವಿರ ಗೌರವಧನವನ್ನು ಕೂಡಲೇ ಪಾವತಿ ಮಾಡಬೇಕು. ರಾಜ್ಯ ಸರ್ಕಾರ ನೂತನ ಮೊಬೈಲ್ ಗಳನ್ನು ನೀಡಿದರೆ ಮಾತ್ರ ಆನ್‌ಲೈನ್ ಆರೋಗ್ಯ ಸಮೀಕ್ಷೆ ಕೈಗೊಳ್ಳಲಾಗುವುದು’ ತಿಳಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಎಚ್. ಎಸ್. ಸುನಂದ, ಖಜಾಂಚಿ ಕಮಲ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


