ಬೀದರ್: ಕೇಂದ್ರ ಸರಕಾರದ ಕಾರ್ಮಿಕ ನೀತಿ ವಿರೋಧಿಸಿ ಭಾರತ್ ಬಂದ್ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಬೃಹತ್ ಮುಷ್ಕರ ನಡೆಸಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲಾಯಿತು.
ನಗರದ ಅಂಬೇಡ್ಕರ್ ವೃತ್ತ, ಭಗತಸಿಂಗ್ ವೃತ್ತ ಹಾಗೂ ಶಿವಾಜಿ ವೃತ್ತದ ಮೂಲಕ ಸಾವಿರಾರು ಮಹಿಳಾ ಕಾರ್ಮಿಕರು ಸೇರಿ ವಿವಿಧ ಕಾರ್ಮಿಕ ಸಂಘಟನೆ ಜತೆಗೂಡಿ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಸಂಘಟನೆ ಜಂಟಿ ಸಮಿತಿಯ ಸಹ ಸಂಚಾಲಕ ಆರ್.ಪಿ.ರಾಜಾ, ಸಂಯುಕ್ತ ಕಿಸಾನ್ ಮೋರ್ಚಾದ ಸಂಚಾಲಕ ನಜೀರ್ ಅಹಮ್ಮದ್, ಕಾರ್ಮಿಕ ಸಂಘಟನೆ ಜಂಟಿ ಸಮಿತಿಯ ಸಹ ಸಂಚಾಲಕ ಮಹೇಶ್ನಾಡಗೌಡ, ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಎಂ.ಡಿ.ಶಫಾಯತ್ ಅಲಿ, ಎಐಟಿಯುಸಿಯ ಜಿಲ್ಲಾಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಕಾರ್ಯದರ್ಶಿ ಸುಜಾತಾ ಕೆ.ದೊಡ್ಡಿ ಹಾಗೂ ಸಾರಿಕಾ ಕಾಳೆ ಸೇರಿದಂತೆ ಸಾವಿರಾರು ಕಾರ್ಮಿಕರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC