ಬೆಂಗಳೂರು: ಕಾವೇರಿಗಾಗಿ ನಾಳೆ ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.
ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಂದ್, ಪ್ರತಿಭಟನೆ ಮಾಡುವುದು ಅವರ ಹಕ್ಕು. ಪ್ರತಿಭಟನೆ ಬಗ್ಗೆ ನಮಗೇನು ತಕರಾರು ಇಲ್ಲ ಎಂದಿದ್ದಾರೆ.
ಯಾರೂ ಬೇಕಾದರೂ ಪ್ರತಿಭಟನೆ ಮಾಡಬಹುದು. ಅದರಲ್ಲಿ ತಪ್ಪಿಲ್ಲ. ಆದರೆ ಯಾವುದೇ ರೀತಿಯಲ್ಲಿ ಸಾರ್ವಜನಿಕ ಆಸ್ತಿ ನಾಶ , ಜನ ಸಮುದಾಯಕ್ಕೆ ತೊಂದರೆ ಮಾಡಬಾರದು. ಪ್ರತಿಭಟನೆ ಮೂಲಕ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಬಾರದು. ಒಂದು ವೇಳೆ ಅಂತಹ ಘಟನೆಗಳು ಕಂಡುಬಂದಲ್ಲಿ ಅದನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ ಎಂದರು.


