ಕೊರಟಗೆರೆ: ಪಾವಗಡದಲ್ಲಿ ಹಿರಿಯ ಪತ್ರಕರ್ತ ಟಿ.ಎ.ರಾಮಾಂಜಿನಪ್ಪ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ ಕೊರಟಗೆರೆಯಲ್ಲಿ ಕೊರಟಗೆರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಗಡಿನಾಡು ಪತ್ರಿಕೆ ಮತ್ತು ಗಡಿನಾಡು ನ್ಯೂಸ್ ಸಂಪಾದಕರ ಮೇಲೆ ನಡೆದ ಹಲ್ಲೆ ಖಂಡಿಸಿ ತಹಶೀಲ್ದಾರ್ ಮಂಜುನಾಥ್ ಕೆ ಮೂಲಕ ಸರ್ಕಾರಕ್ಕೆ ಪತ್ರಕರ್ತರು ಮನವಿ ಸಲ್ಲಿಸಿದರು.
ಪಾವಗಡದಲ್ಲಿ ಹಿರಿಯ ಪತ್ರಕರ್ತ ಟಿ.ಎ.ರಾಮಾಂಜಿನಪ್ಪರವರ ಮೇಲೆ ಮಹಿಳೆಯರು ಮಾರಕ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿದ ರಿಯಲ್ ಎಸ್ಟೇಟ್ ದಂಧೆಕೋರ ನಾರಾಯಣ ರೆಡ್ಡಿ ಮತ್ತು 3 ಜನ ಮಹಿಳೆಯರನ್ನು ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಪತ್ರಕರ್ತರ ಸಂರಕ್ಷಣಾ ಕಾಯಿದೆ ಜಾರಿಗೆ ತರುವಂತೆ ಒತ್ತಾಯಿಸಿದ ಕೊರಟಗೆರೆ ಪತ್ರಕರ್ತರು, ಹಲ್ಲೆಗೊಳಗಾದ ಹಿರಿಯ ಪತ್ರಕರ್ತ ಟಿ.ಎ.ರಾಮಾಂಜಿನಪ್ಪ ರವರ ಕುಟುಂಬಕ್ಕೆ ಸೂಕ್ತ ಭದ್ರತೆ ಮತ್ತು ಪರಿಹಾರ ನೀಡಬೇಕೆಂದು ಮನವಿ ಮಾಡಿದರು.
ಕೊರಟಗೆರೆ ಕೆಯುಡಬ್ಲ್ಯೂ ಜೆ ಅಧ್ಯಕ್ಷರಾದ ಪುರುಷೋತ್ತಮ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು ಇದೇ ಸಂದರ್ಭದಲ್ಲಿ ಕೊರಟಗೆರೆ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು ಸೇರಿದಂತೆ ಸಂಘದ ಎಲ್ಲ ಸದಸ್ಯರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx