ಪಾವಗಡ: ಪತ್ರಕರ್ತ ರಾಮಾಂಜಿನಪ್ಪ ನವರ ಹಲ್ಲೆಯನ್ನು ಖಂಡಿಸಿ ಪಾವಗಡ ತಾಲೂಕಿನ ಪತ್ರಕರ್ತರ ಸಂಘಟನೆಗಳು, ದಲಿತಪರ ಸಂಘಟನೆಗಳು, ಶ್ರೀರಾಮಸೇನೆ, ತಾಲೂಕು ಕುರುಬ ಸಮಾಜ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.
ಪಟ್ಟಣದ ಐ.ಬಿ.ಯಿಂದ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ. ಪಟ್ಟಣದ ಶನಿಮಹಾತ್ಮ ದೇವಾಲದಬಳಿ ಮಾನವ ಸರಪಳಿ ನಿರ್ಮಿಸಿ, ನ್ಯಾಯಕ್ಕಾಗಿ ಘೋಷಣೆಗಳನ್ನು ಕೂಗುತ್ತ ಪಟ್ಟಣದ ಪೊಲೀಸ್ ಠಾಣೆ ಬಳಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು. ತಾಲೂಕು ಕಚೇರಿ ಮುಂದೆ ರಸ್ತೆ ತಡೆ ನಡೆಸಿದರು.
ನಂತರ ಪಾವಗಡ ಪಟ್ಟಣ ಪೊಲೀಸ್ ಠಾಣೆಗೆ ತೆರಳಿದ ಪ್ರತಿಭಟನಾಕಾರರು ಪತ್ರಕರ್ತರಿಗೆ ಸೂಕ್ತ ರಕ್ಷಣೆ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪೊಲೀಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.
ನಂತರ ತಾಲೂಕು ಕಚೇರಿಗೆ ತೆರಳಿದ ಕುರುಬ ಸಮುದಾಯದ ಮುಖಂಡರು ಹಾಗೂ ಸದಸ್ಯರು ಆರೋಪಿ ನಾರಾಯಣ ರೆಡ್ಡಿ ಕುಟುಂಬವನ್ನು ತಾಲೂಕಿನಿಂದ ಗಡಿಪಾರು ಮಾಡಬೇಕು ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವರದಿ: ನಂದೀಶ್ ನಾಯ್ಕ, ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx