ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸಿದ್ದು,ಈ ಬಜೆಟ್ ನಲ್ಲಿ, ಪರಿಶಿಷ್ಟರಿಗೆ ಸೂಕ್ತ ಅನುದಾನ ನೀಡಬೇಕು’ ಎಂದು. ಬಿ. ಆರ್. ಅಂಬೇಡ್ಕರ್ ದಲಿತ ಹೋರಾಟಗಾರರ ಒಕ್ಕೂಟದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಕಾರರು, ತಮ್ಮ ಬೇಡಿಕೆ ಈಡೇರಿಕೆಗಾಗಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ನೀಲಿ
ಶಾಲು ಧರಿಸಿ, ನೀಲಿ ಧ್ವಜ ಹಿಡಿದು ಘೋಷಣೆ ಕೂಗಿದರು. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು ಪರಿಶಿಷ್ಟರಿಗೆ ಭೂ ನ್ಯಾಯ ನೀಡಬೇಕು. ಪರಿಶಿಷ್ಟ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್/ಜೆಇಇ/ ಸಿಇಟಿ ತರಬೇತಿ ನೀಡಬೇಕು.
ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಹಾಗೂ ನೀಡಿದ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಬೇಕು. ರಾಜ್ಯದ 7 ಜಿಲ್ಲೆಗಳ 10 ಊರುಗಳಿಗೆ ಡಾ. ಬಿ. ಆರ್. ಅಂಬೇಡ್ಕರ್ ಭೇಟಿ ನೀಡಿದ್ದು, ಅಲ್ಲೆಲ್ಲ ಸ್ಮಾರಕಗಳನ್ನು ನಿರ್ಮಿಸಬೇಕು’ ಎಂದು ಒತ್ತಾಯಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


