nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೂ.9ರಂದು ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಹೋರಾಟ: ಸಿ.ತಿಮ್ಮಯ್ಯ
    ಜಿಲ್ಲಾ ಸುದ್ದಿ June 8, 2025

    ಜೂ.9ರಂದು ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಹೋರಾಟ: ಸಿ.ತಿಮ್ಮಯ್ಯ

    By adminJune 8, 2025No Comments2 Mins Read
    madiga

    Provided by
    Provided by

    ಸರಗೂರು:  ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸದಾಶಿವ ಆಯೋಗದ ವರದಿ ಜಾರಿ ಕುರಿತು ಮಾದಿಗ ಸಂಘಟನೆಯ ಡಾ.ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆಯ ಅಧ್ಯಕ್ಷ ಸಿ.ತಿಮ್ಮಯ್ಯ ಅವರ ನೇತೃತ್ವದಲ್ಲಿ ಶನಿವಾರ ಸಭೆಯನ್ನು ನಡೆಯಿತು.

    ಈ ವೇಳೆ ಮಾತನಾಡಿದ  ಕೋಟೆ ಮತ್ತು ಸರಗೂರು ತಾಲೂಕಿನ ಡಾಕ್ಟರ್ ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆ ಅಧ್ಯಕ್ಷ  ಸಿ.ತಿಮ್ಮಯ್ಯ, ನಮ್ಮ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಸುಮಾರು 101 ಜಾತಿಗಳಿದ್ದು, ಈ ಜಾತಿಗಳಿಗೆ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಮೀಸಲಾತಿಯನ್ನು ನೀಡಿದ್ದು 101 ಜಾತಿಗಳ ಪೈಕಿ ಅತ್ಯಂತ ಹಿಂದುಳಿದ ಜಾತಿ ಮಾದಿಗ ಜಾತಿ. ನಮ್ಮಜಾತಿಯ ಜನಸಂಖ್ಯೆಗೆ ತಕ್ಕಂತೆ ಒಳ ಮೀಸಲಾತಿಯನ್ನು ಜಾರಿಗೆ ತರುವಂತೆ ಸುಮಾರು 35 ವರ್ಷಗಳಿಂದ ರಾಜ್ಯಾದ್ಯಂತ ಆಡಳಿತ ಮಾಡಿದಂತಹ ಸರ್ಕಾರಗಳನ್ನು ಒತ್ತಾಯಿಸಿ ನಾವು ಪ್ರತಿಭಟನೆಯನ್ನು ಮಾಡುತ್ತಿದ್ದೇವೆ. ಆದರೆ, ಆಡಳಿತ ನಡೆಸುವ ಸರ್ಕಾರಗಳು ಕಿವಿ, ಮೂಗು ಕಣ್ಣುಗಳಿಲ್ಲದಂತೆ ತಾತ್ಸಾರ ಹಾಗೂ ಉದಾಸಿನ ಮನೋಭಾವನೆಯಿಂದ ನಡೆದುಕೊಳ್ಳುತ್ತಿದೆ ಎಂದರು.

    ಕಳೆದ ಬಾರಿ ಬಿಜೆಪಿ ಸರ್ಕಾರದ ಅವಧಿಯಲ್ಲಿ  ಬಸವರಾಜ್ ಬೊಮ್ಮಾಯಿ ರವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮಾಧುಸ್ವಾಮಿ ಸಮಿತಿ ನೇತೃತ್ವದಲ್ಲಿ ರಾಜ್ಯದಲ್ಲಿ ಆದಿಕರ್ನಾಟಕ ಪರಿಶಿಷ್ಟ ಜಾತಿಯಲ್ಲಿ ಯಾವ ಯಾವ ಸಮಾಜದವರು ಎಷ್ಟೆಷ್ಟು ಜನಸಂಖ್ಯೆ ಇದೆ ಎನ್ನುವುದನ್ನು  ಮಾಡಿ ಮೀಸಲಾತಿಯನ್ನು ಹೆಚ್ಚಳ ಮಾಡಿ ನಂತರ ನ್ಯಾಯಮೂರ್ತಿಗಳಾದಂತಹ ಸದಾಶಿವ ಆಯೋಗದ ವರದಿಯಂತೆ ಜನಸಂಖ್ಯೆ ಆಧಾರದ ಮೇಲೆ ಮಾದಿಗ ಸಮಾಜದವರು ಪರಿಶಿಷ್ಟ ಜಾತಿಗಳಲ್ಲಿ ಅತಿ ಹೆಚ್ಚು ಜನಸಂಖ್ಯೆ 6% ರಂತೆ ಹೆಚ್ಚು ಜನಸಂಖ್ಯೆ ಇರುವುದನ್ನ ಮೇಲ್ಕಂಡ ಸಮಿತಿಯು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದು, ಇದರ ವರದಿಯನ್ನು ನಮ್ಮ ಸಮಾಜದ ಹೆಸರಾಂತ ವಕೀಲರುಗಳು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ ಪ್ರಯುಕ್ತ ಸುಪ್ರೀಂಕೋರ್ಟ್ ಈ ದೇಶದ ಎಲ್ಲಾ ರಾಜ್ಯ ಸರ್ಕಾರಗಳಿಗೆ ಒಳ ಮೀಸಲಾತಿಯನ್ನು ಆಯಾಯ ರಾಜ್ಯ ಸರ್ಕಾರಗಳು ಜಾರಿಗೆ ತರಬೇಕೆಂದು ಆದೇಶ ಮಾಡಿತ್ತು. ಆದರೆ ನಮ್ಮ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದು ಈ ತಿಂಗಳು ಮುಂದಿನ ತಿಂಗಳು ಎಂದು ಸಾಬೂಬು ಹೇಳಿಕೊಂಡು, ನ್ಯಾಯಮೂರ್ತಿಗಳಾದ ನಾಗ ಮೋಹನದಾಸ್ ನೇತೃತ್ವದಲ್ಲಿ ಜನಗಣತಿಯನ್ನು ಪುನರ್ ಆರಂಭಿಸಿದ್ದು, ಕಳೆದ ಜೂನ್ ತಿಂಗಳ ಗಡುವು ನೀಡಿದ್ದು ಇದುವರೆಗೂ ಇದು ಪೂರ್ಣಗೊಂಡಿಲ್ಲ ಜೊತೆಗೆ ಒಳ ಮೀಸಲಾತಿ ಜಾರಿಯಾಗುವವರೆಗೂ ಬಡ್ತಿ ನೇಮಕಾತಿ ಮಾಡುವುದಿಲ್ಲ ಎಂದು ಹೇಳಿ ಸರ್ಕಾರ ಒಳಗೊಳಗೆ  ಬಡ್ತಿ ಮಾಡುತ್ತಿರುವುದು ನಮ್ಮ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯ ಎಂದು ಬೇಸರ ವ್ಯಕ್ತಪಡಿಸಿದರು.

    ಇದನ್ನು ಖಂಡಿಸಿ ಸರ್ಕಾರದ ವಿರುದ್ಧ ದಿನಾಂಕ 9–06–2025 ರಂದು ನಮ್ಮ ನ್ಯಾಯಯುತ ಬೇಡಿಕೆಯಾದ ಸದಾಶಿವ ಆಯೋಗ ವರದಿಯನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ನಡೆಯುವ ಹೋರಾಟಕ್ಕೆ ಕೋಟೆ ಮತ್ತು ಸರಗೂರು ತಾಲೂಕಿನ ಮಾದಿಗ ಸಮುದಾಯದ ಜನರು ಬೆಂಬಲ ನೀಡುತ್ತಿದ್ದು ಕಾರ್ಯಕ್ರಮಕ್ಕೆ ತಪ್ಪದೆ ಸಮುದಾಯದ ಜನರು ಬರಬೇಕು ಎಂದು ಕರೆ ನೀಡಿದರು.


    Provided by
    Provided by

    ಸಭೆಯಲ್ಲಿ ಡಾಕ್ಟರ್ ಬಾಬು ಜಗಜೀವನ್ ವಿಚಾರ ವೇದಿಕೆ ಅಧ್ಯಕ್ಷ  ಸಿ.ತಿಮ್ಮಯ್ಯ, ಎಡತೊರೆ ಸುಭಾಷ್, ಸೋಮು ಪಟೇಲ್, ಎಡತೊರೆ ಮಹೇಶ್, ಮುಳ್ಳೂರು ಸಿದ್ದಪ್ಪ, ಮಾತಂಗ ಜನಜಾಗೃತಿ ವೇದಿಕೆ ಅಧ್ಯಕ್ಷ ಬೂದನೂರು ರವೀಶ್, ಮೊಳೆಯೂರು ನಾಗರಾಜ್, ಕೆ.ಟಿ.ಹರೀಶ್, ಶಿವರಾಜಯ್ಯ, ಶಿವಾಜಿ, ದಿನೇಶ್ , ತಿಮ್ಮರಾಜು,ಸೇರಿದಂತೆ ಹಲವಾರು ಜನ ಸಮುದಾಯದ ಮುಖಂಡರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ತುಮಕೂರು: ಆಧುನಿಕ ಸಮಾಜದಲ್ಲೂ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಗರದ ಕೆಇಬಿ (KEB) ಇಂಜಿನಿಯರ್ಸ್…

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.