ಕೊರಟಗೆರೆ: ಅಂಗನವಾಡಿ ಕಾರ್ಯಕರ್ತರಿಗೆ ಹೊಸ ಮೊಬೈಲ್ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ವತಿಯಿಂದ ಪ್ರತಿಭಟನೆ ನಡೆಯಿತು.
ಸರ್ಕಾರವು ಕಳಪೆ ಗುಣಮಟ್ಟದ ಮೊಬೈಲ್ ನೀಡಿರುವುದರ ವಿರುದ್ಧ ಧಿಕ್ಕಾರ ಕೂಗಿದ ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಳಪೆ ಮೊಬೈಲ್ ಗಳನ್ನು ಸರ್ಕಾರ ಹಿಂಪಡೆದು ಹೊಸ ಮೊಬೈಲ್ ಗಳನ್ನು ನೀಡುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂಬ ಎಚ್ಚರಿಕೆಯನ್ನು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರಕ್ಕೆ ನೀಡಿದ್ದಾರೆ.
ಇನ್ನೂ ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರ ಮನವಿಯನ್ನು ಸಿಡಿಪಿಓ ಅಂಬಿಕ ಸ್ವೀಕರಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU