nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ
    • ಅಗ್ನಿ ಅವಘಡ: ಪೌರಕಾರ್ಮಿಕನ ಮನೆ ಭಸ್ಮ:  ತಕ್ಷಣದ ಪರಿಹಾರಕ್ಕೆ ಸಿಪಿಐ(ಎಂ) ಆಗ್ರಹ
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    • ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    ತುಮಕೂರು February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    By adminFebruary 21, 2026No Comments2 Mins Read
    protest

    ತುಮಕೂರು: ಸುಪ್ರೀಂಕೋರ್ಟ್‌ನ ಆದೇಶದಂತೆ ಹಾಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಬೇಕು, ನೇರ ಪಾವತಿ ವ್ಯವಸ್ಥೆ ಜಾರಿಗೆ ತರಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

    ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಅಕ್ಷಯ್ ಎಂ.ಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಮಂಜುಳ ಅವರ ನೇತೃತ್ವದಲ್ಲಿ ನೂರಾರು ಹೊರಗುತ್ತಿಗೆ ನೌಕರರು ಜಿಲ್ಲಾಸ್ಪತ್ರೆಯಿಂದ ಟೌನ್‌ಹಾಲ್, ಅಶೋಕರಸ್ತೆ, ಚರ್ಚ್ ಸರ್ಕಲ್, ಗುಬ್ಬಿಸರ್ಕಲ್, ಶ್ರೀರಾಮನಗರ ರಸ್ತೆ, ಡಿ.ಹೆಚ್.ಓ ಕಚೇರಿ ಮುಂಭಾಗದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.


    Provided by
    Provided by

    ಸೇವಾಭದ್ರತೆ ಕಲ್ಪಿಸಿ:

    ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್ ಎಂ.ಗೌಡ, ಆಯುಷ್ಮಾನ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದು, ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಸರ್ಕಾರ ನಮ್ಮ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಸೇವಾ ಭದ್ರತೆಯ ಅನುಮಾನ ಮೂಡುವಂತೆ ಮಾಡಿದೆ. ಸರ್ಕಾರದ ಕೆಲಸ ಮಾಡುತ್ತಿರುವ ನಮ್ಮ ಸೇವೆಗೆ ಭದ್ರತೆ ನೀಡಬೇಕಾದ್ದು ಆಳುವ ಸರ್ಕಾರಗಳ ಜವಾಬ್ದಾರಿಯಾಗಿದೆ. ನಮಗೂ ಸಂಸಾರ, ಹೆಂಡತಿ, ಮಕ್ಕಳು, ಅವರ ಆರೋಗ್ಯ, ವಿದ್ಯಾಭ್ಯಾಸ, ಮನೆ ಖರ್ಚು, ವೆಚ್ಚಗಳನ್ನು ನೋಡಿಕೊಳ್ಳಬೇಕಾದ ಗುರುತರ ಜವಾಬ್ದಾರಿಯಿದೆ. ಹಾಗಾಗಿ ನಮ್ಮ ಸೇವೆಯನ್ನು ಖಾಯಂಗೊಳಿಸಬೇಕು. ಅಲ್ಲಿಯವರೆಗೆ ನಮ್ಮನ್ನು ನೇರ ಪಾವತಿಗೆ ಒಳಪಡಿಸಬೇಕು. ಹೊರಗುತ್ತಿಗೆ ನೌಕರರ ಬಗ್ಗೆ ಇರುವ ಗೊಂದಲವನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

    ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುಳ ಮಾತನಾಡಿ, ಇತ್ತೀಚೆಗೆ ತುಮಕೂರನಲ್ಲಿ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ವಿವಿಧ ಹಂತದ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿತ್ತು. ಅದರಂತೆ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ. ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೈಗೊಳ್ಳಲಾಗುವುದು ಎಂದರು.

    ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಮಾಜಿ ಸಚಿವ ಸೊಗಡು ಶಿವಣ್ಣ ಪಾಲ್ಗೊಂಡಿದ್ದರು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುಳ, ರಾಜ್ಯ ಸಮಿತಿ ಸದಸ್ಯರಾದ ಸಿದ್ದಪ್ಪ, ರವೀಶ್, ಯೋಗೀಶ್, ತುಮಕೂರು ಜಿಲ್ಲಾಧ್ಯಕ್ಷ ಶಿವರಾಮ್, ಪ್ರಧಾನ ಕಾರ್ಯದರ್ಶಿ ಸತೀಶ್‌ ಕುಮಾರ್ ಸೇರಿದಂತೆ ನೂರಾರು ಹೊರಗುತ್ತಿಗೆ ನೌಕರರು ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

    March 9, 2026

    ಅಗ್ನಿ ಅವಘಡ: ಪೌರಕಾರ್ಮಿಕನ ಮನೆ ಭಸ್ಮ:  ತಕ್ಷಣದ ಪರಿಹಾರಕ್ಕೆ ಸಿಪಿಐ(ಎಂ) ಆಗ್ರಹ

    March 9, 2026

    ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ

    March 8, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದಲ್ಲಿ ಇಂದು ಬೆಳ್ಳಂಬೆಳಗ್ಗೆ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಯೊಬ್ಬರು…

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.