ಬೆಂಗಳೂರು: ಚುನಾವಣಾ ಬಾಂಡ್ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜಕೀಯ ಷಡ್ಯಂತರ ಮಾಡುತ್ತಿರುವ ಬಿಜೆಪಿ ಜೆಡಿಎಸ್ ನ ಕೆಲವು ಭ್ರಷ್ಟಾಚಾರಿಗಳು ಸಿದ್ದರಾಮಯ್ಯನವರ ರಾಜೀನಾಮೆ ನೀಡಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಆದರೆ ಈಗ ಕೋಟ್ಯಂತರ ಅಕ್ರಮ ಚುನಾವಣಾ ಬಾಂಡ್ ಹಗರಣದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ರಾಜೀನಾಮೆಗೆ ಯಾಕೆ ನೀವು ಒತ್ತಾಯಿಸುವುದಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕೂಡ ಈ ಹಗರಣದಲ್ಲಿ ಆರೋಪಿಯಾಗಿದ್ದಾರೆ. ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರದ ಮಂತ್ರಿಗಳು ವಾಮಮಾರ್ಗದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಈಗ ದೇಶದ ಜನತೆಗೆ ತಿಳಿದಿದೆ. ಇವರ ವಿರುದ್ಧ ಪ್ರಧಾನಿ ನರೇಂದ್ರಮೋದಿ ಕ್ರಮ ಕೈಗೊಳ್ಳುತ್ತಾರ ಎಂದು ಪ್ರಶ್ನಿಸಿದರು.
ನಿರ್ಮಲ ಸೀತಾರಾಮನ್ ಪ್ರಕ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಿಯವರು ಸಹ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296