ಬೀದರ್: ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗೊಳಿಸುವುದು, ಆರ್ ಎನ್ ಐ ಸಂಖ್ಯೆ ಹೊಂದಿದ ಎಲ್ಲಾ ಪತ್ರಕರ್ತರಿಗೆ ರಾಜ್ಯದಾದ್ಯಂತ ಸಂಚರಿಸಲು ಉಚಿತ ಬಸ್ ಪಾಸ್ ಸೇರಿದಂತೆ ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಡಿ. 15 ರಂದು ಬೆಳಗಾವಿಯ ಸುವರ್ಣ ಸೌಧದ ಎದುರು ಧರಣಿ ನಡೆಸಿಲು ನಿರ್ಧರಿಸಿದೆ.
ಡಿ.8ರಿಂದ 19 ರವರಿಗೆ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ನಡೆಯಲಿದೆ. ಈ ವೇಳೆ ಸರಕಾರದ ಗಮನ ಸೆಳೆಯಲು ಧರಣಿ ನಡೆಸಲಾಗುತ್ತಿದೆ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ತಿಳಿಸಿದ್ದಾರೆ.
ಪತ್ರಕರ್ತರ ಮಾಶಾಸನ ನಿಯಮ ಸರಳೀಕರಿಸುವುದು ಹಿರಿಯ ಪತ್ರಕರ್ತರಿಗೆ ನೆರವು ಕಲ್ಪಿಸುವುದು ಕರ್ತವ್ಯದ ವೇಳೆ ಅಥವಾ ಅಪಘಾತದಲ್ಲಿ ಪತ್ರಕರ್ತರು ಮೃ ತಪಟ್ಟರೆ ಅವರ ಕುಟುಂಬಕ್ಕೆ 10 ಲಕ್ಷ ಪರಿಹಾರ ಒದಗಿಸುವುದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ 300 ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡುವುದು ಬೇಡಿಕೆಗಳಾಗಿವೆ ಎಂದು ಹೇಳಿದ್ದಾರೆ
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


