ಸಚಿವೆ ಹೆಬ್ಬಾಳ್ಕರ್ ಬೆಂಬಲಿಗರಿಂದ ಬಿಜೆಪಿ ನಾಯಕ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಕೂಡಲೇ ಅವರನ್ನು ಬಂಧಿಸಬೇಕು ಆಗ್ರಹಿಸಿ ಬಿಜೆಪಿ ನಿಯೋಗ ಪೊಲೀಸ್ ಕಮಿಷನರ್ ಗೆ ಮನವಿ ಸಲ್ಲಿಸಿತು.
ಈ ವೇಳೆ ಪೋಲಿಸ್ ಕಮಿಷನರ್ ಯಡಾ ಮಾರ್ಟಿನ್ ಅವರ ಜೊತೆ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಮಾತನಾಡಿ, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅವರನ್ನು ಶೀಘ್ರದಲ್ಲೇ ಬಂಧಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು
ಈ ವೇಳೆ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಅವರು, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಖಂಡಿತವಾಗಿಯೂ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕರು ಈ ವಿಚಾರವನ್ನು ಗೃಹ ಸಚಿವರ ಗಮನಕ್ಕೆ ತರಲು ಪೊಲೀಸ್ ಕಮಿಷನರ್ ಅವರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಡೋಣಿ, ಧನಶ್ರೀ ದೇಸಾಯಿ, ಮಹಾನಗರ ಪಾಲಿಕೆ ಸದಸ್ಯ ಶ್ರೇಯಸ್ ನಾಕಾಡಿ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ, ಜಿಲ್ಲಾಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೊಲಕಾರ, ವಕೀಲರಾದ ಧನ್ಯಕುಮಾರ ಪಾಟೀಲ್, ವಿನೋದ್ ಪಾಟೀಲ ಶಿಲ್ಪಾ ಕೆಕರೆ, ಪ್ರಸಾದ್ ದೇವರಮನಿ, ಸುಭಾಷ್ ಸಣ್ಣವೀರಪ್ಪನವರ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx