ಬೀದರ್: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಸಂಸದ ಸಾಗರ ಖಂಡ್ರೆ ನೇತೃತ್ವದಲ್ಲಿ ಬೀದರ್ ನಲ್ಲಿ ಪ್ರತಿಭಟನೆ ನಡೆಯಿತು.
ರಾಜಕೀಯ ದ್ವೇಷ ಹಾಗೂ ಕೇಂದ್ರ ಸರ್ಕಾರದ ಒತ್ತಡದಿಂದಾಗಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ರಾಜ್ಯಪಾಲರ ನಡೆಯನ್ನು ಖಂಡಿಸಿದರು.
ಜನಪರ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಹಣಿಯಲು ಆಗದಿರುವ ಕಾರಣ ರಾಜಭವನವನ್ನು ದುರುಪಯೋಗ ಮಾಡಿಕೊಂಡು ಮುಖ್ಯಮಂತ್ರಿಗಳ ಹೆಸರಿಗೆ ಕಳಂಕ ತರುವ ಕೆಲಸ ಬಿಜೆಪಿ ಅವರು ಹಾಗೂ ಕೇಂದ್ರ ಸರ್ಕಾರದವರು ಮಾಡುತ್ತಿದ್ದಾರೆ ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನದ ಮುಖ್ಯಸ್ಥರಾಗಿ ಹೀಗೆ ಅಸಂವಿಧಾನಿಕ ನಡೆಯನ್ನು ಅನುಸರಿಸುತ್ತಿರುವ ಕರ್ನಾಟಕದ ರಾಜ್ಯಪಾಲರನ್ನು ರಾಷ್ಟ್ರಪತಿಗಳು ಕೂಡಲೇ ವಾಪಾಸ್ ಕರೆಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q