ತುಮಕೂರು : ಬೆಳಗಾವಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಕೆ ಎಸ್ ಆರ್ ಟಿ ಸಿ ನಿವೃತ್ತ ಕ್ಷೇಮಾಭಿವೃದ್ಧಿ ಟ್ರಸ್ಟ್ ಹಾಗೂ ಕನ್ನಡಪರ, ದಲಿತ, ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ತುಮಕೂರಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲಾಯಿತು. ಎಂಇಎಸ್ ಸಂಘಟನೆ ನಿಷೇಧಿಸಬೇಕು ಎಂದು ಒತ್ತಾಯಿಸಲಾಯಿತು.
ಎಂಇಎಸ್ ಪುಂಡರನ್ನ ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಒತ್ತಾಯ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ಸಂಘಟನೆಗಳಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4