ನೇರಪಾವತಿ ಪೌರಕಾರ್ಮಿಕರಿಗೆ ಆರು ವರ್ಷಗಳಿಂದ ಪಿಂಚಣಿ ನೀಡಿಲ್ಲವೆಂದು ಆರೋಪಿಸಿ ಕರ್ನಾಟಕ ರಾಜ್ಯ ಮಹಾನಗರಪಾಲಿಕೆ, ನಗರಸಭೆ ಮತ್ತು ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಸದಸ್ಯರು ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
2018ರ ಜನವರಿ 1ರಂದು ನೇರವೇತನ ಪೌರಕಾರ್ಮಿಕರಿಗೆ ನಿವೃತ್ತಿ ವೇತನ ನೀಡಬೇಕೆಂಬ ಆದೇಶವಾಗಿದೆ. ಆದರೆ, ಇದುವರೆಗೂ ಒಂದು ಸಾವಿರಕ್ಕಿಂತ ಹೆಚ್ಚು ಪೌರಕಾರ್ಮಿಕರ ಖಾತೆಗೆ ಹಣ ಜಮೆಯೇ ಆಗಿಲ್ಲ. ಈಗಾಗಲೇ 500ಕ್ಕೂ ಜನ ಮರಣ ಹೊಂದಿದ್ದಾರೆ. ಕುಟುಂಬ ನಿರ್ವಹಣೆ ಮಾಡುವುದೇ ಕಷ್ಟಕರವಾಗಿದೆ’ ಎಂದು ನಗರ ಘಟಕದ ಅಧ್ಯಕ್ಷ ಮುನಿರಾಜು ಹೇಳಿದರು.
ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಚಿನ್ನೋಡು, ಎಸ್. ಎನ್. ವೇಣುಗೋಪಾಲ, ಎನ್. ನಾಗರಾಜು ಇದ್ದರು.
ಸಂಘದಿಂದ ಬಿಬಿಎಂಪಿಯ ಆಡಳಿತ ವಿಭಾಗದ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ ಮಾಡಲಾಯಿತು. ಈ ಬಗ್ಗೆ ಮುಖ್ಯ ಆಯುಕ್ತರೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


