ಢಾಕಾ: ಬಾಂಗ್ಲಾದೇಶದಲ್ಲಿ ಮೀಸಲಾತಿ ಹೋರಾಟ ಸೋಮವಾರ ಭಾರೀ ಪ್ರತಿಭಟನೆಗೆ ತಿರುಗಿದ್ದು, ಸೇನಾ ದಂಗೆಯಾಗಿ ಮಾರ್ಪಟ್ಟಿದೆ.
ಇದರ ಬೆನ್ನಲ್ಲೇ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಬಾಂಗ್ಲಾದೇಶವನ್ನು ತೊರೆದರು. ಇದರ ಬೆನ್ನಲ್ಲೇ ಸೇನಾ ಮುಖ್ಯಸ್ಥ ಜನರಲ್ ವೇಕರ್–ಉಜ್–ಜಮಾನ್ ಮಿಲಿಟರಿ ಮಧ್ಯಂತರ ಸರ್ಕಾರವನ್ನು ರಚಿಸುತ್ತದೆ ಎಂದು ಹೇಳಿದರು. ಅಲ್ಲದೇ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಈ ನಡುವೆ ಹಸೀನಾ ಮಿಲಿಟರಿ ವಿಮಾನದಲ್ಲಿ ದೇಶದಿಂದ ಪಲಾಯನ ಮಾಡಿದ್ದಾರೆ ಎನ್ನುವ ವಿಚಾರ ತಿಳಿದು ಹಸೀನಾ ಅವರ ನಿವಾಸಕ್ಕೆ ನುಗ್ಗಿ ಅವರ ಬ್ರಾ ಮತ್ತು ಸೀರೆಗಳು ಸೇರಿದಂತೆ ತಮ್ಮಿಂದ ಸಾಧ್ಯವಾದದ್ದನ್ನು ಲೂಟಿ ಮಾಡಿದರು.
ವ್ಯಕ್ತಿಯೊಬ್ಬ ನಾಚಿಕೆಯಿಲ್ಲದೆ ಕೈಯಲ್ಲಿ ಬ್ರಾಗಳನ್ನು ಹಿಡಿದು ವಿಕೃತಿ ಮೆರೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296