ಬೆಂಗಳೂರು: ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುವುದನ್ನು ವಿರೋಧಿಸುವುದಾಗಿ ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದರ ವಿರುದ್ಧ ಉಭಯ ಸದನಗಳಲ್ಲೂ ಹೋರಾಡುವುದಾಗಿ ತಿಳಿಸಿದ್ದಾರೆ.
ನಮ ಹೋರಾಟಕ್ಕೆ ಸರ್ಕಾರ ಬಗ್ಗದಿದ್ದರೆ ಜನರ ಮುಂದೆ ಈ ಹೋರಾಟವನ್ನು ಕೊಂಡೊಯ್ಯುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಆಕೋಶ ಹೊರ ಹಾಕಿರುವ ಅವರು, ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತತ್ವಕ್ಕೆ ಬಿಜೆಪಿ ಸದಾ ಬದ್ಧವಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ಬಹುಪಾಲು ಇತರರಿಗೆ ಅಲ್ಪಪಾಲು ಎಂಬ ನೀತಿ ಅನುಸರಿಸಲು ಹೊರಟು ಕುವೆಂಪು ಅವರು ಕಲ್ಪಿಸಿದ ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4