ತುಮಕೂರು: ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವುದು ಸರ್ಕಾರಿ ಅಧಿಕಾರಿಗಳ ಜವಾಬ್ದಾರಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು.
“ಸುಶಾಸನ ಸಪ್ತಾಹ–ಪ್ರಶಾಸನ ಗ್ರಾಮಗಳ ಕಡೆಗೆ” ಅಭಿಯಾನದ ಅಂಗವಾಗಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಸ್ಮರಣಾರ್ಥ ಕೇಂದ್ರ ಸರ್ಕಾರವು ಪ್ರತೀ ವರ್ಷ ಡಿಸೆಂಬರ್ ಮಾಹೆಯಲ್ಲಿ “ಸುಶಾಸನ ಸಪ್ತಾಹ–ಪ್ರಶಾಸನ ಗ್ರಾಮಗಳ ಕಡೆಗೆ” ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ದೇಶದ ನಾಗರಿಕರಿಗೆ ಸರ್ಕಾರದ ಯೋಜನೆಗಳು, ಸವಲತ್ತುಗಳು ಸೇರಿದಂತೆ ವಿವಿಧ ಸೇವೆಗಳ ಮಾಹಿತಿಯನ್ನು ನೀಡಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಡಳಿತ ವ್ಯವಸ್ಥೆಯಲ್ಲಿ ಕಳೆದ 10 ವರ್ಷಗಳಲ್ಲಿ ಹಲವಾರು ಬದಲಾವಣೆಗಳು ಬಂದಿವೆ. ಸಾರ್ವಜನಿಕರಿಗೆ ಸಕಾಲದೊಳಗೆ ಸೇವೆಗಳನ್ನು ಒದಗಿಸುವ ಮೂಲಕ ಜನಸ್ನೇಹಿ ಆಡಳಿತವನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ನಿವೃತ್ತ ಅಪರ ಜಿಲ್ಲಾಧಿಕಾರಿ ದೊಡ್ಡಪ್ಪ ಮಾತನಾಡಿ, ಪಾರದರ್ಶಕತೆಯಿಂದ ಆಡಳಿತ ನಡೆಸುವುದು, ಸಮರ್ಪಕ ರೀತಿಯಲ್ಲಿ ಕಡತಗಳ ನಿರ್ವಹಣೆ ಮಾಡುವುದು, ನಿಗದಿತ ಸಮಯದಲ್ಲಿ ಕೆಲಸ ಮಾಡುವುದು ಉತ್ತಮ ಆಡಳಿತದ ಮುಖ್ಯ ಉದ್ದೇಶವಾಗಿದೆ. ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಸರ್ಕಾರವು ವಿವಿಧ ಯೋಜನೆ ಮತ್ತು ಸೇವೆಗಳನ್ನು ಜಾರಿಗೆ ತಂದಿದ್ದು, ಸಾರ್ವಜನಿಕರಿಗೆ ಸುಲಭವಾಗಿ ಸರ್ಕಾರದ ಸೇವೆಗಳನ್ನು ತಲುಪಿಸಲು ಡಿಜಿಟಲೀಕರಣ ವ್ಯವಸ್ಥೆಯನ್ನು ತಂದಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲ ಸಿದ್ಧಪ ಪೂಜೇರಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx