ಬೆಂಗಳೂರು: ಯಲಹಂಕದ ಕೊಂಡಪ್ಪ ಲೇಔಟ್ ಬಳಿ ಇರುವ ಶಿವಚೇತನಾ ಪ್ರಾವಿಷನ್ ಸ್ಟೋರ್ ನಲ್ಲಿ ರಾಬರಿ ನಡೆಸಿದ ಕದೀಮರು ಸುಮಾರು 66 ಸಾವಿರ ಮೌಲ್ಯದ ಸಿಗರೇಟ್ ದೋಚಿ ಪರಾರಿಯಾಗಿದ್ದರು.
ಈ ಪ್ರಕರಣ ಬೆನ್ನುಹತ್ತಿದ ಯಲಹಂಕ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಸಿಗರೇಟ್ ದೋಚಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು.
ಸದ್ಯ ಈ ಕೃತ್ಯಕ್ಕೆ ಬಳಕೆ ಮಾಡಿದ್ದ ವಸ್ತುಗಳು ಹಾಗೂ ಸಿಗರೇಟ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ.


