ತುಮಕೂರು: ಜಿಲ್ಲೆಯ 11 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 71 ಅಂಗನವಾಡಿ ಕಾರ್ಯಕರ್ತೆ, 18 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 214 ಅಂಗನವಾಡಿ ಸಹಾಯಕಿಯರ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಏಪ್ರಿಲ್ 7 ಕಡೆಯ ದಿನವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿ ಸದರಿ ಪಟ್ಟಿಯನ್ನು ಸಂಬಂಧಿಸಿದ ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯತಿ, ವಾರ್ಡ್, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲೆ ಇತ್ಯಾದಿ ಸ್ಥಳ ಹಾಗೂ ಜಿಲ್ಲಾಡಳಿತದ ಜಾಲತಾಣ https://tumkur.nic.in ನಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಏಪ್ರಿಲ್ 7ರೊಳಗಾಗಿ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4