ತುಮಕೂರು: ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿಯಿದ್ದ 73 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:3ರ ಅನುಪಾತದಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈಗಾಗಲೇ ತುಮಕೂರು ಜಿಲ್ಲಾ ವೆಬ್ ಸೈಟ್ www.tumkur.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದ್ದಾರೆ.
ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆ ಬಹು ಉಪಯೋಗಿ ಸಭಾಂಗಣದಲ್ಲಿ 2025 ಜನವರಿ 6ರಂದು ಬೆಳಿಗ್ಗೆ 10ಗಂಟೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಲಾಗುವುದು. ತಾತ್ಕಾಲಿಕ ಪಟ್ಟಿಯನ್ವಯ ಆಯ್ಕೆಯಾಗಿರುವ ಅಭ್ಯರ್ಥಿಗಳು ನಿಗದಿತ ದಿನಾಂಕದಂದು ಎಸ್.ಎಸ್.ಎಲ್.ಸಿ/ಪಿಯುಸಿ ಅಂಕಪಟ್ಟಿ, ಸಿಂಧುತ್ವ ಪ್ರಮಾಣ ಪತ್ರ, ಪೊಲೀಸ್ ವರದಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಪರಿಶೀಲನೆ ನಡೆಯುವ ಸ್ಥಳದಲ್ಲಿ ಹಾಜರಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ ದೂ.ವಾ.ಸಂ: 0816–2278718ನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx