ರಾಜ್ಯದಲ್ಲಿ ನಡೆದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂಗಳ ತಲುಪಿದೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಅನ್ಯಾಯಕ್ಕೆ ಒಳಗಾಗಿ ಬೇಸರಗೊಂಡಿರುವ ಅಭ್ಯರ್ಥಿಗಳು ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪರೀಕ್ಷೆಯಲ್ಲಿ ವಂಚನೊಳಗಾದವರಿಗೆ ನ್ಯಾಯ ದೊರಕಬೇಕು. ೨೦೨೧ರಲ್ಲಿ ನಡೆದ ಬಿಎ ಪರೀಕ್ಷೆಯಲ್ಲೂ ಅಕ್ರಮ ನಡೆದಿದೆ. ಈ ಬಗ್ಗೆಯೂ ತನಿಖೆ ಮಾಡಿ ನ್ಯಾಯ ದೊರಕಿಸಿಕೊಡಬೇಕು. ಈ ವಿಚಾರದಲ್ಲಿ ಮೋದಿಯವರ ಬಗ್ಗೆ ನಮಗೆ ಅಪಾರ ಗೌರವವಿದ್ದು, ಅಕ್ರಮದ ಬಗ್ಗೆ ತನಿಖೆ ನಡೆಸಿ, ನ್ಯಾಯ ಕೊಡಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ಪ್ರಧಾನಿಯವರಿಗೆ ಬರೆದ ಪತ್ರದಲ್ಲಿ ನೊಂದ ಅಭ್ಯರ್ಥಿಗಳು ಉಲ್ಲೇಖಿಸಿದ್ದಾರೆ.
ಸರ್ಕಾರಿ ಹುದ್ದೆಗಳು ಹಣವಿದ್ದರೆ ಮಾತ್ರ ಎಂಬ ಅಭಿಪ್ರಾಯ ಮೂಡಿದೆ. ಸರ್ಕಾರದ ಈ ವ್ಯವಸ್ಥೆಯಿಂದ ವಂಚನೊಳಗಾಗಿರುವ ನಾವು ಮಾನಸಿಕವಾಗಿ ಸತ್ತು ಹೋಗಿದ್ದೇವೆ. ಆದ್ದರಿಂದ ಸರ್ಕಾರಿ ಹುದ್ದೆಗಳಿಗೆ ಇನ್ನು ಮುಂದೆ ಪರೀಕ್ಷೆ ಬರೆಯುವುದಿಲ್ಲ. ನಮಗೆ ನ್ಯಾಯ ದೊರಕದಿದ್ದರೆ ಉಗ್ರಗಾಮಿ ಸಂಘಟನೆ ಸೇರುವುದಾಗಿ ಹೇಳಿಕೊಂಡಿದ್ದಾರೆ.
ವಂಚನೊಳಗಾಗಿರುವ ೮ ಮಂದಿಯಿದ್ದು, ನಾವೆಲ್ಲರೂ ಈ ನಿರ್ಧಾರ ಕೈಗೊಂಡಿರುವುದಾಗಿ ಪ್ರಧಾನಿಯವರಿಗೆ ಬರೆದಿರುವ ಎರಡು ಪುಟಗಳ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB