ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿವಿಧ ಜಿಲ್ಲೆಯಲ್ಲಿ 25 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಇಂದು ಸಿಐಡಿ ಅಧಿಕಾರಿಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಸಿಐಡಿ ಎಸ್ಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಸಿಐಡಿ ಪೊಲೀಸರು ದಾಳಿ ನಡೆಸಿದ್ದಾರೆ.
ಇಂದು ಬೆಳಿಗ್ಗೆ 4 ಗಂಟೆಯಿಂದ 30 ತಂಡಗಳ 100ಕ್ಕೂ ಹೆಚ್ಚು ಸಿಐಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಇಂದಿನ ಕಾರ್ಯಾಚರಣೆಯಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮ ಸಂಬಂಧ 25 ಜನರನ್ನು ಸಿಐಡಿ ವಿಭಾಗ ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


