ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್, ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ತಂಡ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದೆ.
ದಿವ್ಯಾ ಹಾಗರಗಿ ಬಂಧನದ ಬಳಿಕ ಇಂದು ಡಿಜಿಪಿ ಪ್ರವೀಣ್ ಸೂದ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಅವರ ಆರ್.ಟಿ.ನಗರದ ನಿವಾಸದಲ್ಲಿ ಭೇಟಿಯಾಗಿ, ದಿವ್ಯಾ ಹಾಗರಗಿ ಬಂಧನದ ವಿಚಾರವಾಗಿ ಮಾಹಿತಿ ನೀಡಿದ್ದಾರೆ.
ದಿವ್ಯಾ ಹಾಗರಗಿ ಒಡೆತನಕ್ಕೆ ಸೇರಿದ ಜ್ಞಾನ ಜ್ಯೋತಿ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ಒಎಂಆರ್ ಶೀಟ್ ತಿದ್ದುಪಡಿ ಹಾಗೂ ಬ್ಲೂಟೂತ್ ಮೂಲಕ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ಕಳೆದ ಏ. 9 ರಂದು ಎಫ್ ಐಆರ್ ದಾಖಲಾಗುತ್ತಿದ್ದಂತೆ ದಿವ್ಯಾ ಪರಾರಿಯಾಗಿದ್ದಳು. ಇದೀಗ ಕೊನೆಗೂ ಈಕೆಯನ್ನು ಬಂಧಿಸುವಲ್ಲಿ ಸಿಐಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5