ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿಯಿಂದ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ.
ಇದೀಗ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೆಡ್ ಕಾನ್ಸ್ ಟೇಬಲ್ ಲಕ್ಕಪ್ಪ ಸೇರಿ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಹೆಚ್ ಎ ಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿದ್ದ ಲಕ್ಕಪ್ಪ ಬ್ಲೂಟೂತ್ ಹೆಡ್ ಫೋನ್ ಬಳಸಿ ಪರೀಕ್ಷೆ ಬರೆದಿದ್ದನು ಎಂಬ ಆರೋಪ ಕೇಳಿಬಂದಿದೆ.
ಪಿಎಸ್‌ಐ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಈತನ ಹೆಸರಿತ್ತು ಎನ್ನಲಾಗಿದೆ. ಸದ್ಯ, ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೊಳಪಡಿಸಲಿದ್ದಾರೆ.
ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ 13 ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ತನಿಖೆಯನ್ನು ಮುಂದುವರೆಸಿರುವಂತ ಸಿಐಡಿ ಹಲವರ ಬಂಧನಕ್ಕೂ ಬಲೆ ಬೀಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy