ಮೈಸೂರು: ಪಿಎಸ್ ಐ ಪರೀಕ್ಷೆ ಹಗರಣವನ್ನು ಸರಿಯಾದ ರೀತಿಯಲ್ಲಿ ತನಿಖೆಮಾಡಬೇಕು ಈ ಹಗರಣವು ಕೇವಲ ಕಲುಬುರ್ಗಿಗೆ ಮಾತ್ರ ಸೀಮಿತವಾಗಬಾರದು.ಈವಿಷಯಕ್ಕೆ ಸಂಬಂಧಿಸಿದಂತೆ ಸರಿಯಾದ ಸರ್ಕಾರ ರೀತಿಯಲ್ಲಿ ತನಿಖೆ ನಡೆತಯುತ್ತಿಲ್ಲ ಕೇವಲ ಒಂದೇ ಪರೀಕ್ಷಾ ಕೇಂದ್ರದ ಬಗ್ಗೆ ಎಫ್ಐಆರ್ ಮಾಡಿದ್ದಾರೆ, ಬೇರೆ ಬೇರೆ ಪರೀಕ್ಷಾ ಕೇಂದ್ರಗಳ ಮೇಲೆ ತನಿಖೆಯಾಗಬೇಕು. ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಮೇಲೆ ತನಿಖೆಯಾಗಬೇಕು. ಪರೀಕ್ಷಾ ಅಭ್ಯರ್ಥಿಗಳು ಹಲವು ಪರೀಕ್ಷಾ ಕೇಂದ್ರಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ, ಆದರೆ ತನಿಖೆ ಮಾತ್ರ ನಡೆಯುತ್ತಿಲ್ಲ ಎಂದರು ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ಮರು ಪರೀಕ್ಷೆ ಮಾಡಬೇಕೆಂದಿರುವ ಸರ್ಕಾರ 545 ಮಂದಿಯ ಒಎಂಆರ್ ಶೀಟ್ ತರಿಸಿಕೊಂಡಿದ್ದಾದರೂ ಯಾಕೆ? ಇಲ್ಲಿ ಸರ್ಕಾರದ ದಡ್ಡತನ ಎದ್ದು ಕಾಣುತ್ತಿದ್ದೆ. 300 ಜನರು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಅವರೇ ಹೇಳಿದ್ದಾರೆ. ಆದರೆ ಸರ್ಕಾರ ಇಲ್ಲಿಯವರೆಗೆ ಎಷ್ಟು ಜನರನ್ನು ಬಂಧಿಸಿದೆ? ಒಂದೆರಡು ಕಿಂಗ್ ಪಿನ್ ಸಿಕ್ಕರೆ ಅದರಲ್ಲೇ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಮೈಸೂರಿನಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ ಇ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂದಿಸಿದಂತೆ ತನಿಖೆ ಚುರುಕುಗೊಂಡರೆ ರಾಜ್ಯಕ್ಕೆ ಬಿಜೆಪಿಯಿಂದ ಮೂರನೇ ಮುಖ್ಯಮಂತ್ರಿ ಸಿಗಲಿದ್ದಾರೆ ಎಂದು ತಿಳಿಸಿದ್ದಾರೆ. ಬಿಟ್ ಕಾಯಿನ್ ಪ್ರಕರಣದಲ್ಲಿ ಕೂಡ ಯಾವುದೇ ರೀತಿಯ ತನಿಖೆ ನಡೆಯುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy