ಬೆಂಗಳೂರು: ಜ.23ರಂದು ನಡೆಸಿದ್ದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ, ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳ, ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಒಟ್ಟು 545 ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296