ಬೆಂಗಳೂರು : ಶೀಘ್ರದಲ್ಲೇ ಶಿಕ್ಷಣ ಇಲಾಖೆಯು 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ಶೀಘ್ರವೇ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಶೀಘ್ರವೇ ಅಧಿಸೂಚನೆ ಪ್ರಕಟಗೊಳ್ಳಲಿದೆ ಎಂದು ಹೇಳಿದ್ದಾರೆ.
15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಬಳಿಕ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


