ತುಮಕೂರು: ಕೊರಟಗೆರೆ ತಾಲ್ಲೂಕು ಸಿ.ಎನ್.ದುರ್ಗ ಹೋಬಳಿ ಬೂದಗವಿ ಸಿದ್ದರಬೆಟ್ಟ ಶ್ರೀ ಸಿದ್ದೇಶ್ವರಸ್ವಾಮಿ ದೇವಸ್ಥಾನದ ದಾಸೋಹ ನಿಲಯದ ಉಗ್ರಾಣದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಅಕ್ಕಿ, ಬೆಲ್ಲ, ಹುಣಸೇಹಣ್ಣು, ತೆಂಗಿನಕಾಯಿ ಹಾಗೂ ರಾಗಿಯನ್ನು ಏಪ್ರಿಲ್ 3ರಂದು ಬೆಳಿಗ್ಗೆ 11 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು.
ಹರಾಜು ಪ್ರಕ್ರಿಯೆಯನ್ನು ಕೊರಟಗೆರೆ ತಾಲ್ಲೂಕು ತಹಶೀಲ್ದಾರ್ ಅವರ ಸಮಕ್ಷಮದಲ್ಲಿ ದೇವಾಲಯದ ದಾಸೋಹ ಭವನದ ಆವರಣದಲ್ಲಿ ನಡೆಸಲಾಗುವುದು. ಹರಾಜಿನಲ್ಲಿ ಭಾಗವಹಿಸುವವರು 10,000 ರೂ.ಗಳ ಮುಂಗಡವನ್ನು ಪಾವತಿಸಬೇಕು.
ಹೆಚ್ಚಿನ ಮಾಹಿತಿ ಹಾಗೂ ನಿಬಂಧನೆಗಳಿಗಾಗಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4