ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ.
ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ದುರ್ಗ ಹೋಬಳಿಯ ತೋವಿನಕೆರೆಯಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ಮಾರ್ಗದರ್ಶನದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಜನಸಂಪರ್ಕ ಸಭೆಯನ್ನು ಸೆಪ್ಟೆಂಬರ್ 15 ರಂದು ಏರ್ಪಡಿಸಲಾಗಿದೆ ಎಂದು ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ತಾಲ್ಲೂಕು ಕಚೇರಿಯಲ್ಲಿ ಗುರುವಾರ ಏರ್ಪಡಿಸಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಇತ್ತೀಚಿಗೆ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ, ಗೃಹ ಜ್ಯೋತಿ ಸೇರಿದಂತೆ ಅನೇಕ ಕುಂದು- ಕೊರತೆಗಳನ್ನು ಅರ್ಜಿ ಪಡೆಯುವ ಮುಖಾಂತರ ಸ್ವೀಕರಿಸಿ ಅರ್ಜಿಯ ಸಮಸ್ಯೆಯನ್ನು ಬಗೆ ಹರಿಸುವುದರೊಂದಿಗೆ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 15 ರಂದು ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮದಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಿದೆ ಎಂದರು.
ಈ ಸಭೆಯಲ್ಲಿ ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್, ಜಿಲ್ಲಾಧಿಕಾರಿ ಶ್ರೀನಿವಾಸ್, ಜಿಪಂ ಸಿಇಒ ಪ್ರಭು, ಮಧುಗಿರಿ ಉಪ ವಿಭಾಗಾಧಿಕಾರಿ ರಿಷಿ ಆನಂದ್ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸುವರು ಎಂದು ಹೇಳಿದರು.
ವಿಡಿಯೋ ನೋಡಿ: