ಹೊಸದಿಲ್ಲಿ: ಕಳೆದ ತಿಂಗಳು ದಿಲ್ಲಿ ಮೆಟ್ರೋ ರೈಲಿನಲ್ಲಿ ಸಾರ್ವಜನಿಕರ ಎದುರೇ ಹಸ್ತಮೈಥುನ ಮಾಡಿಕೊಂಡ ವ್ಯಕ್ತಿಯ ಚಿತ್ರವನ್ನು ದಿಲ್ಲಿ ಪೊಲೀಸರು ಬುಧವಾರ ಬಿಡುಗಡೆಗೊಳಿಸಿದ್ದಾರೆ.
ಈತನ ಬಗ್ಗೆ ಯಾವುದೇ ಮಾಹಿತಿ ಇದ್ದರೂ ನಾಗರಿಕರು ಹಂಚಿ ಕೊಳ್ಳುವಂತೆ ಪೊಲೀಸರು ಮನವಿ ಮಾಡಿದ್ದಾರೆ. ದಿಲ್ಲಿ ಮೆಟ್ರೋ ರೈಲಿನಲ್ಲಿ ಅಶ್ಲೀಲ ಕೃತ್ಯದಲ್ಲಿ ತೊಡಗಿದ್ದ ವ್ಯಕ್ತಿಯು ಪೊಲೀಸರಿಗೆ ಬೇಕಾಗಿದ್ದಾನೆ. ಈತನ ಬಗ್ಗೆ ಮಾಹಿತಿ ತಿಳಿದರೆ ಪೊಲೀಸ್ ಕಂಟ್ರೋಲ್ ರೂಮ್ 1511 ಅಥವಾ ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ. ಮಾಹಿತಿ ನೀಡಿದ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುವುದು ಎಂದು ದಿಲ್ಲಿ ಡಿಸಿಪಿ ಮೆಟ್ರೋ ಟ್ವೀಟ್ ಮಾಡಿದ್ದಾರೆ.
ದಿಲ್ಲಿ ಮೆಟ್ರೋದಲ್ಲಿ ತನ್ನ ಮೊಬೈಲ್ ನೋಡುತ್ತಾ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಇದನ್ನು ಕಂಡು ಕಸಿವಿಸಿಗೊಂಡ ಸಹ ಪ್ರಯಾಣಿಕರು ಅವನಿಂದ ದೂರ ಸರಿದಿದ್ದಾರೆ. ಮತ್ತೂಬ್ಬ ಪ್ರಯಾಣಿಕ ಆತನ ಅಶ್ಲೀಲ ಕೃತ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಈ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


