nammatumakuru

    Subscribe to Updates

    Get the latest creative news from FooBar about art, design and business.

    What's Hot

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026
    Facebook Twitter Instagram
    ಟ್ರೆಂಡಿಂಗ್
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೀಟಿಂಗ್ ನೆಪದಲ್ಲಿ  ಹೊರ ಹೋಗುತ್ತಿರುವ ಪಿಡಿಓ, ಕಾರ್ಯದರ್ಶಿಗಳು, ಸಾರ್ವಜನಿಕರ ಪರದಾಟ: ಪ್ರದೀಪ್ ಯನಗುಂದೆ
    ಜಿಲ್ಲಾ ಸುದ್ದಿ March 9, 2025

    ಮೀಟಿಂಗ್ ನೆಪದಲ್ಲಿ  ಹೊರ ಹೋಗುತ್ತಿರುವ ಪಿಡಿಓ, ಕಾರ್ಯದರ್ಶಿಗಳು, ಸಾರ್ವಜನಿಕರ ಪರದಾಟ: ಪ್ರದೀಪ್ ಯನಗುಂದೆ

    By adminMarch 9, 2025No Comments2 Mins Read
    pradeep

    ಬೀದರ್: ಗ್ರಾಮೀಣ ಭಾಗದಲ್ಲಿ ಬಹುತೇಕ ಗ್ರಾಮಸ್ಥರು ಅವರ ಕೆಲಸ –ಕಾರ್ಯಗಳಿಗಾಗಿ  ಗ್ರಾಮ ಪಂಚಾಯತ್ ಕಚೇರಿಗೆ ಹೋಗುವುದು ಸಹಜ. ಪಂಚಾಯತ್ ಕಚೇರಿಗೆ ಹೋದರೆ ಅಲ್ಲಿ ಪಿಡಿಓ ಆಗಲಿ ಕಾರ್ಯದರ್ಶಿ ಆಗಲಿ  ಇರುವುದಿಲ್ಲ, ಅವರೆಲ್ಲಿ ಎಂದು ಕೇಳಿದಾಗ ತಾಲೂಕ್ ಪಂಚಾಯತ್ ಅಥವಾ ಜಿಲ್ಲಾ ಪಂಚಾಯತ್ ನಲ್ಲಿ ಸಭೆಗೆ ಹೋಗಿದ್ದಾರೆ ಎನ್ನುವ ಉತ್ತರ ಸಿಗುತ್ತಿದೆ, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು  ಕೌಠಾ (ಬಿ) ಗ್ರಾಮ ಪಂಚಾಯತ್  ಸದಸ್ಯ ಪ್ರದೀಪ ಯನಗುಂದೆ ಬೇಸರ ವ್ಯಕ್ತಪಡಿಸಿದ್ದಾರೆ.

    ರಾಜ್ಯ ಸರ್ಕಾರವು ಸುಮಾರು ಸುತ್ತೋಲೆಗಳನ್ನು ಹೊರಡಿಸಿ. ತಾಲೂಕು ಪಂಚಾಯತ್ ಹಾಗೂ  ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸುವ ಸಭೆಗಳನ್ನು ವರ್ಚುವಲ್ ಮೂಲಕ ಸಭೆಗಳನ್ನು ಆಯೋಜಿಸುವಂತೆ ಸೂಚಿಸಿದೆ. ಇಂಟರ್ನೆಟ್ ಇರದ ಪಂಚಾಯತಿಯ ಪಿಡಿಓ / ಕಾರ್ಯದರ್ಶಿ ಹತ್ತಿರದ ಗ್ರಾಮ ಪಂಚಾಯಿತಿಗೆ ಹೋಗಿ ಸದರಿ ವರ್ಚುವಲ್ ಸಭೆಯಲ್ಲಿ ಭಾಗವಹಿಸಬಹುದೆಂದು ಅವಕಾಶ ಕಲ್ಪಿಸಿರುತ್ತದೆ. ಆದರೆ ಬೀದರ್ ಜಿಲ್ಲೆಯಲ್ಲಿ ಪಿಡಿಓ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತಿಯಲ್ಲಿ ಸಭೆ/ ಮೀಟಿಂಗ್ ನೆಪದಲ್ಲಿ ತಿಂಗಳಲ್ಲಿ 8 ರಿಂದ 10 ದಿವಸಗಳ ಕಾಲ ಪಂಚಾಯತಿಯಿಂದ ಗೈರು ಹಾಜರಾಗುತ್ತಿದ್ದಾರೆ, ಇದರಿಂದಾಗಿ ಗ್ರಾಮಸ್ಥರು ಪಂಚಾಯತ್ ಕಛೆರಿಗೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಅದು ಅಲ್ಲದೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ಅಭಿವೃದ್ಧಿ ಯೋಜನೆಗಳು ಆಮೆಗತಿಯಲ್ಲಿ ಸಾಗುತ್ತಿವೆ, ಇದರಿಂದ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗುವುದಲ್ಲದೇ ಅರ್ಹ ಫಲಾನುಭವಿಗಳೂ ಸಹ ಸರ್ಕಾರಗಳ ಮಹತ್ತರ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಪಿಡಿಓ ಹಾಗೂ ಕಾರ್ಯದರ್ಶಿಗಳು ಪಂಚಾಯತ್ ಕಚೇರಿಗೆ ತಡವಾಗಿ ಬಂದು ಬಯೋಮೆಟ್ರಿಕ್ ಹಾಜರಾತಿ ಹಾಕುತ್ತಾರೆ, ವಿಚಾರಿಸಿದರೆ ಜಿಲ್ಲಾ ಪಂಚಾಯತ್ ಅಥವಾ ತಾಲೂಕು ಪಂಚಾಯತ್ ನಲ್ಲಿ ಸಭೆಗೆ ಹಾಜರಾಗಿರುವ ಕಾರಣ ತಡವಾಗಿದೆ ಎಂದು ತಿಳಿಸುತ್ತಾರೆ.

    ಆದುದರಿಂದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಅಧಿಕಾರಿಗಳು ತಮ್ಮ ತಮ್ಮ ಕಚೇರಿಯಲ್ಲಿ ಕರೆಯಲಾದ ಭೌತಿಕ ಸಭೆಗಳ ಕುರಿತು ಒಂದು ತಿಂಗಳ ಮೊದಲು ನೋಟಿಸು ಜಾರಿ ಮಾಡಬೇಕು ಹಾಗೂ ಅಂತಹ ನೋಟಿಸ್ ಗಳನ್ನು ಗ್ರಾಮ ಪಂಚಾಯತಿಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ ತಿಳಿಯುವಂತೆ ಪಂಚಾಯತ್ ಕಛೆರಿಯ ನೋಟಿಸ್ ಬೋರ್ಡ್ ಗೆ ಒಂದು ತಿಂಗಳ ಮುಂಚೆಯೇ ಬಿತ್ತರಿಸಬೇಕು. ಸರ್ಕಾರದ ಸುತ್ತೋಲೆಯಲ್ಲಿ ಸೂಚಿಸಿರುವಂತೆ ವರ್ಚುವಲ್ ಸಭೆಗಳನ್ನು ಆಯೋಜಿಸಬೇಕು ಹಾಗೂ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಅಳವಡಿಸಿ, ಸಂಬಂಧಪಟ್ಟ ಅಧಿಕಾರಿಗಳು ನಿಯಮಿತವಾಗಿ ನಿಗಾವಹಿಸಬೇಕು. ಇದರಿಂದ ಬಡ ಗ್ರಾಮಸ್ಥರಿಗೆ ಅನುಕೂಲವಾಗುತ್ತದೆ ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು  ಅನುಷ್ಠಾನಗೊಳಿಸುವಲ್ಲಿಯೂ ತುಂಬಾ ಸಹಕಾರಿಯಾಗುತ್ತದೆ ಎಂದು  ಪ್ರದೀಪ ಯನಗುಂದೆ ಮನವಿ ಮಾಡಿಕೊಂಡಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


    Provided by
    Provided by
    admin
    • Website

    Related Posts

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    July 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ತಿಪಟೂರು: ಕೇವಲ 9.50 (ಒಂಭತ್ತುವರೆ) ರೂಪಾಯಿಗೋಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಎಸ್ಬಿಐ ವ್ಯವಸ್ಥಾಪಕರು ರೈತನಿಗೆ ನೋಟಿಸ್ ನೀಡಿ,…

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.