ಪಾವಗಡ: ಕಳೆದ ಹಲವಾರು ವರ್ಷಗಳಿಂದ ದುರಸ್ತಿ ಕಾಣದ ಸ್ಥಿತಿಯಲ್ಲಿರುವ ರಸ್ತೆಯಲ್ಲಿ ಓಡಾಡಲು ಜನರಿಗೆ ತುಂಬಾ ತೊಂದರೆಯಾಗುತ್ತಿದ್ದು, ರಸ್ತೆ ಅಭಿವೃದ್ಧಿಪಡಿಸಿವಂತೆ ಸಾರ್ವಜನಿಕರು ಆಕ್ರೋಶವನ್ನು ಹೊರಹಾಕಿದ್ದಾರೆ.
ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ಕೇಂದ್ರದಿಂದ ಮೇಗಳಪಾಳ್ಯ ಲಂಬಾಣಿಹಟ್ಟಿ ಬಲ್ಲೇನಹಳ್ಳಿ ತಿಪ್ಪಯ್ಯನದುರ್ಗ ಕ್ಕೆ ಹೋಗುವ ಮುಖ್ಯ ರಸ್ತೆಯ ದುಸ್ಥಿತಿಯಾಗಿದೆ.
ಈ ರಸ್ತೆಯಲ್ಲಿ ಪ್ರತಿನಿತ್ಯ ಹಲವಾರು ವಿದ್ಯಾರ್ಥಿಗಳು, ರೈತರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ಆದರೆ ಈ ರಸ್ತೆ ಬಹಳ ಕುಣಿಗಳಿಂದ ಆವರಿಸಿದ್ದು, ಸವಾರರಿಗೆ ಆತಂಕವನ್ನು ಉಂಟು ಮಾಡುತ್ತಿದೆ. ಹಲವಾರು ಜನ ಅಪಘಾತಗಳಿಗೆ ಗುರಿಯಾಗುತ್ತಿದ್ದು, ತೊಂದರೆ ಅನುಭವಿಸುತ್ತಿದ್ದಾರೆ.
ಚುನಾವಣೆ ಸಮಯದಲ್ಲಿ ಮಾತ್ರ ಬರುವ ಜನಪ್ರತಿನಿಧಿಗಳು ತದನಂತರ ಈ ಕಡೆ ತಿರುಗುತ್ತಿಲ್ಲ. ಇದರಿಂದ ಗ್ರಾಮೀಣ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ರಸ್ತೆಯ ಬಗ್ಗೆ ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿಸಿಕೊಳ್ಳುತ್ತಿದ್ದಾರೆ.
ವರದಿ: ನಂದೀಶ್ ನಾಯ್ಕ ಪಿ. ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx