ತುಮಕೂರು : ಕಳೆದ ಎರಡು ದಿನದ ಹಿಂದೆ ಸುರಿದ ಬಾರಿ ಮಳೆಯಿಂದ ಈ ಒಂದು ರಸ್ತೆಯಲ್ಲಿ ಓಡಾಡಲು ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.
ತುಮಕೂರಿನ ಹೊರವಲಯದ ಶ್ರೀ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಪಕ್ಕದಲ್ಲಿ ಹೋಗುವ ಅಗಲಕೋಟೆ ಗ್ರಾಮದ ಎನ್.ಹೆಚ್. ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರಸ್ತೆಯಲ್ಲಿ ಜನರು ನಡೆದಾಡಲೂ ಕಷ್ಟಕರ ಸನ್ನಿವೇಶ ಸೃಷ್ಟಿಯಾಗಿದೆ.
ಇದೇ ರಸ್ತೆಯಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಜನರು ತುಮಕೂರು ನಗರಕ್ಕೆ ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ಆದರೆ ಈ ಒಂದು ರಸ್ತೆ ನೋಡಿದರೆ ಬಹಳ ಅದು ಬಿಟ್ಟಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ರಸ್ತೆಯ ಬಗ್ಗೆ ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿಸಿಕೊಳ್ಳುತ್ತಿದ್ದಾರೆ.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx