ಕೊರಟಗೆರೆ: ಜನಸ್ನೇಹಿ ವೈದ್ಯರ ವರ್ಗಾವಣೆ ವಿರೋಧಿಸಿ ಆಸ್ಪತ್ರೆಗೆ ಮುತ್ತಿಗೆ ಹಾಕಿ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ನಡೆಯಿತು.
ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಕಮರ್ ತಪ್ಸಮ್ ವರ್ಗಾವಣೆ ಹಿನ್ನೆಲೆ ದಿಡೀರ್ ಪ್ರತಿಭಟನೆ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಅಕ್ಕಿರಾಂಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರತಿಭಟನೆ ನಡೆಯಿತು.
ತುಮಕೂರು ಡಿಎಚ್ ಓ ಡಾ.ನಾಗೇಂದ್ರಪ್ಪ ಮತ್ತು ಕೊರಟಗೆರೆ ಟಿಹೆಚ್ ಓ ವಿಜಯಕುಮಾರ್ ವಿರುದ್ದ ಆಕ್ರೋಪ್ರತಿಭಟನಾಕಾರರು ಆಕ್ರೋಶ ಭುಗಿಲೆದ್ದಿದೆ. ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಜನಸ್ನೇಹಿ ವೈದ್ಯೆಯ ವರ್ಗಾವಣೆ ಖಂಡಿಸಿ ಅಕ್ಕಿರಾಂಪುರ ಸೇರಿದಂತೆ ಅಕ್ಕಪಕ್ಕದ ಸ್ಥಳೀಯರು ಆಸ್ಪತ್ರೆಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದರು.
ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಡಾ.ಕಮರ್ ತಪ್ಸಮ್ ಹಿರಿಯರು, ಮಹಿಳೆಯರು ಮತ್ತು ಮಕ್ಕಳ ಜೊತೆ ಸೌಜನ್ಯದಿಂದ ವರ್ತಿಸಿ ಪ್ರತಿನಿತ್ಯ ಸಂಜೆ 6 ಗಂಟೆವರೆಗೂ ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ. ಜನಸ್ನೇಹಿ ವೈದ್ಯರನ್ನು ರಾಜಕೀಯ ದುರುದ್ದೇಶದಿಂದ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ರದ್ದುಪಡಿಸಿ ಇವರನ್ನು ಇಲ್ಲೆ ಮುಂದುವರೆಸಲು ಸಾರ್ವಜನಿಕರು ಒತ್ತಾಯ ಮಾಡಿದರು.
ವಡ್ಡಗೆರೆ ವೈದ್ಯ ಪ್ರಕಾಶಗೌಡ ವಿರುದ್ದ ಆರೋಪ:
ಪ್ರಸ್ತುತ ವಡ್ಡಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಭಾರ ವೈದ್ಯರಾಗಿ ಕೆಲಸ ನಿರ್ವಹಣೆ ಮಾಡುತ್ತಿರುವ ಪ್ರಕಾಶಗೌಡ ಕಳೆದ ಇದೇ ಅಕ್ಕಿರಾಂಪುರ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕರ್ತವ್ಯಲೋಪ ಆರೋಪದ ಅಡಿಯಲ್ಲಿ ವರ್ಗಾವಣೆ ಮಾಡಲಾಗಿತ್ತು. ಇದರ ಜೊತೆಯಲ್ಲಿ ಹಿರಿಯ ರೋಗಿಗಳನ್ನು ಮುಟ್ಟದೇ ಪರೀಕ್ಷೆ, ಚಿಕಿತ್ಸೆ ನೀಡುತ್ತಿದ್ದು, ಆಸ್ಪತ್ರೆಗೆ ಬರುತ್ತಿರಲಿಲ್ಲ ಎಂಬ ಆರೋಪದ ಮೇಲೆ ವರ್ಗಾವಣೆ ಮಾಡಲಾಗಿತ್ತು.
ವರದಿ : ಮಂಜುಸ್ವಾಮಿ ಎಂ.ಎನ್.ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4