ಬೀದರ್: ಮಳೆಗಾಲ ಆರಂಭವಾಗಿರುವ ಹಿನ್ನೆಲೆ ಸಾರ್ವಜನಿಕರು ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸುವಂತೆ ಬೀದರ್ ಜಿಲ್ಲಾ ಪೊಲೀಸರು ಮನವಿ ಮಾಡಿದ್ದಾರೆ.
ಬೀದರ ಜಿಲ್ಲೆಯ ಸಂಚಾರಿ ಪೊಲೀಸರು ಜನ ಸಾಮಾನ್ಯರ ಪ್ರಾಣ ರಕ್ಷಣೆಗೆ ಮಳೆ, ಗಾಳಿ, ಬಿಸಿಲು, ಚಳಿ ಲೆಕ್ಕಿಸದೇ ಸತತವಾಗಿ 24×7 ದುಡಿಯುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ತಪ್ಪದೇ ಸಂಚಾರಿ ನಿಯಮಗಳನ್ನು ಪಾಲಿಸಿ ಸಹಕರಿಸಿ ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಮಳೆಯ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯ ಫೋಟೋವನ್ನು ಹಂಚಿಕೊಳ್ಳಲಾಗಿದ್ದು, ಇದು ಬೀದರ್ ಜಿಲ್ಲಾ ಪೊಲೀಸರ ಕರ್ತವ್ಯ ನಿಷ್ಠೆಯ ನಿದರ್ಶನವಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


