ಬೆಂಗಳೂರು: ಇಂದಿನಿಂದ ಫೆಬ್ರವರಿ 13ವರೆಗೆ ಜಕ್ಕೂರು ಬಳಿಯ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ನಡೆಯುತ್ತಿದೆ. ಆರಂಭಿಕ ದಿನವಾದ ಇಂದು ಹೆಬ್ಬಾಳ, ಬಳ್ಳಾರಿ ರಸ್ತೆ, ಕೊಡಿಗೆಹಳ್ಳಿ, ಜಕ್ಕೂರು ಸೇರಿ ಹಲವೆಡೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಜಕ್ಕೂರು ಬಿಸಿಲಿಗೆ ಬಳಲಿ ಪ್ರಯಾಣಿಕರು ಹೈರಾಣಾಗಿದ್ದು, ವಾಹನಗಳು ನಿಂತಲ್ಲೇ ನಿಂತಿದ್ದು, ಆಮೆಗತಿಯಲ್ಲಿ ಸಂಚರಿಸುತ್ತಿವೆ. ವಿಮಾನ ನಿಲ್ದಾಣಕ್ಕೆ ತೆರಳುವವರು, ಶಾಲೆ, ಕಾಲೇಜು, ಕಚೇರಿ ಹಾಗೂ ಇನ್ನಿತರ ಕೆಲಸಗಳಿಗೆ ತೆರಳುವವರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದರು.
ಏರ್ ಶೋ ಹಿನ್ನೆಲೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ. ಏರ್ ಶೋ ಗೆ 4 ದಿನ ಹೋಗುವ ಪ್ಲ್ಯಾನ್ ಮಾಡಿಕೊಂಡಿರುವವರಿಗೆ ಈ ಮಾರ್ಗದಲ್ಲಿ ಸಂಚರಿಸುವಂತೆ ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ.
ಬಾಣಸವಾಡಿ ಕಡೆಯಿಂದ ಬಂದು ನಾಗವಾರ ಜಂಕ್ಷನ್ ಬಳಿ ಬಲ ತಿರುವು ಪಡೆದು ಥಣೆಸಂದ್ರ ಮುಖ್ಯ ರಸ್ತೆ ಮೂಲಕ ಸಂಚರಿಸಬಹುದು ಎಂದು ಸೂಚನೆ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx