nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    • ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    ರಾಜ್ಯ ಸುದ್ದಿ August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    By adminAugust 25, 2026No Comments3 Mins Read
    sira.jpg

    ತುಮಕೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಮಗ್ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

    ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿ, ತಹಶೀಲ್ದಾರ್, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಕಚೇರಿ, ಮತಗಟ್ಟೆಗಳು ಹಾಗೂ http://tumkur.nic.in ವೆಬ್ ಸೈಟ್ ನಲ್ಲಿ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕರಡು ಪಟ್ಟಿಯನ್ನು ಪರಿಶೀಲಿಸಿ, ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 24 ರಿಂದ ಸೆಪ್ಟೆಂಬರ್ 23ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅ. 22ರವರೆಗೆ ಆಕ್ಷೇಪಣೆಗಳ ಸಂಬಂಧ ನೋಟಿಸ್ ನೀಡಿ ಅರ್ಜಿ ಇತ್ಯರ್ಥಗೊಳಿಸುವ ಪ್ರಕ್ರಿಯೆ ನಡೆಯಲಿದೆ. ಅ. 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.

    20,61,786 ಮತದಾರರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೂ ಮೊದಲು 01.01.2024ರ ಅರ್ಹತಾ ದಿನಾಂಕಕ್ಕೆ ಜಿಲ್ಲೆಯಾದ್ಯಂತ 22,98,879 ಮತದಾರರು ಮತದಾರರ ಪಟ್ಟಿಯಲ್ಲಿದ್ದರು. ಪರಿಷ್ಕರಣೆ ಬಳಿಕ ಕರಡು ಮತದಾರರ ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 20,61,786 ಮತದಾರರು ಕಂಡುಬಂದಿದ್ದು, ಈ ಹಿಂದೆ ಈ ಪೈಕಿ 10,22,023 ಪುರುಷರು, 10,39,709 ಮಹಿಳೆಯರು ಹಾಗೂ 54 ಇತರೆ ವರ್ಗಕ್ಕೆ ಸೇರಿದವರಿದ್ದಾರೆ. ವಿವಿಧ ಕಾರಣಗಳಿಂದ 2,37,093 ಮಂದಿ ಮತದಾರರ ಎಸ್ಎಸ್ಆರ್ ಅರ್ಜಿ ಸಲ್ಲಿಕೆಯಾಗಿಲ್ಲ. ಇಷ್ಟು ಮಂದಿ ಕರಡು ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ತಿಳಿಸಿದರು.

    ಮತಗಟ್ಟೆಗಳ ಸಂಖ್ಯೆ ಏರಿಕೆ

    ವಿಧಾನಸಭಾ ಕ್ಷೇತ್ರವಾರು ಮತದಾರರ ಪಟ್ಟಿ ಪರಿಷ್ಕರಣೆಯ ಅಂಗವಾಗಿ ಮತಗಟ್ಟೆಗಳ ಪುನರ್ರಚನೆ ಪ್ರಕ್ರಿಯೆ ನಡೆದಿದ್ದು, 200ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿರುವ ಮತಗಟ್ಟೆಗಳನ್ನು ವಿಭಜಿಸಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಿದೆ. ಕಟ್ಟಡಗಳ ಸ್ಥಳ ಬದಲಾವಣೆ ಹಾಗೂ ಹೆಸರು ಬದಲಾವಣೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 118 ಹೊಸ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಈ ಹಿಂದಿದ್ದ ಒಟ್ಟು ಮತಗಟ್ಟೆಗಳ ಸಂಖ್ಯೆ 2627 ರಿಂದ 2745ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು.

    ಹೊಸ ಮತದಾರರ ನೋಂದಣಿ

    ಕರಡು ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ನಮೂನೆ-6ರ ಮೂಲಕ ಮತದಾರರ ನೋಂದಣಾಧಿಕಾರಿಗಳು, ಬಿಎಲ್ಒ ಅಥವಾ ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ದಿನಾಂಕ 2024ರ ಜನವರಿ 1ಕ್ಕೆ 18 ವರ್ಷ ತುಂಬುವ ಯುವ ಮತದಾರರೂ ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮತದಾರರ ಪಟ್ಟಿಯಲ್ಲಿ ಹೆಸರು ರದ್ದತಿಗೆ ನಮೂನೆ 7, ಸ್ಥಳಾಂತರಕ್ಕೆ ನಮೂನೆ 8 ಅನ್ನು ಭರ್ತಿಮಾಡಿ ಬಿಎಲ್ಒಗಳಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    237093 ಎಎಸ್ ಡಿಡಿಬಿ ಮತದಾರರು

    ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ (ಎಸ್ಎಸ್ಆರ್) ಸಂಬಂಧಿಸಿದಂತೆ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆ ಕಾರ್ಯದಲ್ಲಿ ಗೈರು ಹಾಜರಿರುವವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತಪಟ್ಟವರು, ಈಗಾಗಲೇ ನೋಂದಾಯಿಸಿಕೊಂಡಿರುವ(ಡುಪ್ಲಿಕೇಟ್) ಹಾಗೂ ಇತರೆ ವರ್ಗಗಳಿಗೆ ಸೇರಿದ ಒಟ್ಟು 237093 ಮತದಾರರನ್ನು ಎಎಸ್ಡಿಡಿಬಿ ಪಟ್ಟಿಯಲ್ಲಿ ಗುರುತಿಸಲಾಗಿದೆ. ಈ ಪೈಕಿ 33021 ಮತದಾರರು ಸಮೀಕ್ಷೆ ವೇಳೆ ಗಣತಿದಾರರಿಗೆ 3 ಬಾರಿ ಅಲಭ್ಯರಾಗಿದ್ದು, 134264 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. 49084 ಮಂದಿ ಮೃತಪಟ್ಟಿದ್ದು, 18829 ಮಂದಿಯ ಹೆಸರು ಎರಡೆರಡು ಕಡೆ ಇದ್ದು ಹಾಗೂ 1895 ಮಂದಿಯ ಹೆಸರು ಇತರೆ ಕಾರಣಗಳಿಂದ ಕರಡು ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ತಿಳಿಸಿದರು.

    ವಿಧಾನಸಭಾಕ್ಷೇತ್ರವಾರು ಕರಡು ಮತದಾರರ ಪಟ್ಟಿ :

    ಜಿಲ್ಲೆಯಾದ್ಯಂತ ಒಟ್ಟು 2745 ಮತಗಟ್ಟೆಗಳಿದ್ದು, ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ 270 ಮತಗಟ್ಟೆಗಳಿದ್ದು, 101573 ಪುರುಷ, 103582 ಮಹಿಳೆ ಮತ್ತು 1 ಇತರೆ ಸೇರಿದಂತೆ ಒಟ್ಟು 205156 ಮತದಾರರಿದ್ದಾರೆ. ತಿಪಟೂರು ಕ್ಷೇತ್ರದಲ್ಲಿ 232 ಮತಗಟ್ಟೆಗಳಿದ್ದು, 82729 ಪುರುಷ, 87990 ಮಹಿಳೆ ಮತ್ತು 2 ಇತರೆ ಸೇರಿದಂತೆ ಒಟ್ಟು 170721 ಮತದಾರರಿದ್ದಾರೆ.

    ತುರುವೇಕೆರೆ ಕ್ಷೇತ್ರದಲ್ಲಿ 229 ಮತಗಟ್ಟೆಗಳಿದ್ದು, 84548 ಪುರುಷ, 86142 ಮಹಿಳೆ ಸೇರಿದಂತೆ ಒಟ್ಟು 170690 ಮತದಾರರಿದ್ದಾರೆ. ಕುಣಿಗಲ್ ಕ್ಷೇತ್ರದಲ್ಲಿ 270 ಮತಗಟ್ಟೆಗಳಿದ್ದು, 93599 ಪುರುಷ, 93631 ಮಹಿಳೆ ಸೇರಿದಂತೆ ಒಟ್ಟು 187230 ಮತದಾರರಿದ್ದಾರೆ. ತುಮಕೂರು ನಗರ ಕ್ಷೇತ್ರದಲ್ಲಿ 247 ಮತಗಟ್ಟೆಗಳಿದ್ದು, 95980 ಪುರುಷ, 103193 ಮಹಿಳೆ ಮತ್ತು 14 ಇತರೆ ಸೇರಿದಂತೆ ಒಟ್ಟು 199187 ಮತದಾರರಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 238 ಮತಗಟ್ಟೆಗಳಿದ್ದು, 94919 ಪುರುಷ, 97588 ಮಹಿಳೆ ಮತ್ತು 5 ಇತರೆ ಸೇರಿದಂತೆ ಒಟ್ಟು 192512 ಮತದಾರರಿದ್ದಾರೆ.

    ಕೊರಟಗೆರೆ ಕ್ಷೇತ್ರದಲ್ಲಿ 256 ಮತಗಟ್ಟೆಗಳಿದ್ದು, 103303 ಪುರುಷ, 106185 ಮಹಿಳೆ ಮತ್ತು 7 ಇತರೆ ಸೇರಿದಂತೆ ಒಟ್ಟು 209495 ಮತದಾರರಿದ್ದಾರೆ. ಗುಬ್ಬಿ ಕ್ಷೇತ್ರದಲ್ಲಿ 222 ಮತಗಟ್ಟೆಗಳಿದ್ದು, 85022 ಪುರುಷ, 86690 ಮಹಿಳೆ ಮತ್ತು 6 ಇತರೆ ಸೇರಿದಂತೆ ಒಟ್ಟು 171718 ಮತದಾರರಿದ್ದಾರೆ. ಶಿರಾ ಕ್ಷೇತ್ರದಲ್ಲಿ 282 ಮತಗಟ್ಟೆಗಳಿದ್ದು, 105931 ಪುರುಷ, 105436 ಮಹಿಳೆ ಮತ್ತು 7 ಇತರೆ ಸೇರಿದಂತೆ ಒಟ್ಟು 211374 ಮತದಾರರಿದ್ದಾರೆ. ಪಾವಗಡ ಕ್ಷೇತ್ರದಲ್ಲಿ 251 ಮತಗಟ್ಟೆಗಳಿದ್ದು, 93335 ಪುರುಷ, 89969 ಮಹಿಳೆ ಮತ್ತು 8 ಇತರೆ ಸೇರಿದಂತೆ ಒಟ್ಟು 183312 ಮತದಾರರಿದ್ದಾರೆ. ಮಧುಗಿರಿ ಕ್ಷೇತ್ರದಲ್ಲಿ 248 ಮತಗಟ್ಟೆಗಳಿದ್ದು, 88807 ಪುರುಷ, 88326 ಮಹಿಳೆ ಮತ್ತು 5 ಇತರೆ ಸೇರಿದಂತೆ ಒಟ್ಟು 177138 ಮತದಾರರಿದ್ದಾರೆ.

    ತಿದ್ದುಪಡಿ ದೋಷವಿರುವ 69236 ಮತದಾರರು ಹಾಗೂ ಮ್ಯಾಪಿಂಗ್ ಆಗದ 42642 ಸೇರಿದಂತೆ ಒಟ್ಟು 111878 ಮತದಾರರಿಗೆ ನೋಟಿಸ್ ನೀಡಲಾಗುತ್ತಿದ್ದು ನಿಗದಿತ ದಿನಾಂಕದಂದು ಸೂಕ್ತ ದಾಖಲೆಗಳೊಂದಿಗೆ ಹಾಜರಾಗಲು ಸೂಚಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    admin
    • Website

    Related Posts

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

    August 25, 2026

    ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ತುಮಕೂರು: ಮಹಿಳೆಯೊಬ್ಬರನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು…

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.