ತುಮಕೂರು: ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕ(2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ)ಗಳ ಆಯ್ಕೆ ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ತಾತ್ಕಾಲಿಕ ಪಟ್ಟಿ ಮತ್ತು ಪುಸ್ತಕಗಳ ಪ್ರದರ್ಶನವನ್ನು ಬೆಂಗಳೂರು ಹಂಪಿನಗರ ಪಶ್ಚಿಮ ವಲಯದ ನಗರ ಕೇಂದ್ರ ಗ್ರಂಥಾಲಯದಲ್ಲಿ ಅಕ್ಟೋಬರ್ 4 ಮತ್ತು 5ರಂದು ಹಮ್ಮಿಕೊಳ್ಳಲಾಗಿದೆ.
ಆಯ್ಕೆಗಾಗಿ ಸಲ್ಲಿಸಿದ ಪುಸ್ತಕಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಲೇಖಕರು, ಲೇಖಕ–ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಅಕ್ಟೋಬರ್ 9ರೊಳಗಾಗಿ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ.
ಆಕ್ಷೇಪಣೆಗಳನ್ನು ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀದಿ, ಬೆಂಗಳೂರು-560001 ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dpl.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296