ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ.ಪರೀಕ್ಷೆಗಾಗಿ ಪಿಯು ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಲಾಗಿದೆ.
ಪಿಯುಸಿ ಪರೀಕ್ಷೆಗಳು ಮಾರ್ಚ್ 9, 2023 ರಿಂದ ಮಾರ್ಚ್ 29, 2023 ರವರೆಗೆ ನಡೆಯಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಗಳನ್ನು ಬಿಡುಗಡೆ ಮಾಡಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ 1,109 ಕೇಂದ್ರಗಳಲ್ಲಿ ನಡೆಯಲಿದ್ದು, 7,26,213 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಇದರಲ್ಲಿ ಹೊಸದಾಗಿ 6.29 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 25,847 ಖಾಸಗಿ, 70,586 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ಒಟ್ಟು 3,62,509 ಬಾಲಕಿಯರು, ಮತ್ತು 3,63,704 ಬಾಲಕರು ಸೇರಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯದಲ್ಲಿ 2,47,269 ಮತ್ತು ವಿಜ್ಞಾನ ವಿಭಾಗದಿಂದ 2,44,129 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


