ಬೆಂಗಳೂರು: ಕಳೆದ ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ.
ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ.
ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ.
ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್ ಆಗಿದ್ದರೆ ,ಬಾಲಕರು 69.05% ಪಾಸ್ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


