ಹೊಳೆನರಸೀಪುರ: ತಾಲ್ಲೂಕು, ಹಳ್ಳಿಮೈಸೂರು ಹೋಬಳಿ ಶೆಟ್ಟರ ಕೊಪ್ಪಲು ಗ್ರಾಮದ ಮೋಹನ್ ಅವರ ಪುತ್ರ ಅರ್ಜುನ್ (17) ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅರ್ಜುನ್ ನ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಮೂಡಿಸಿದೆ.
ಕುರಿಯನ್ನು ತೊಳೆಯಲು ಕೆರೆಗೆ ತೆರಳಿದ್ದ ವೇಳೆ ಅರ್ಜುನ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ರೈತ ಕುಟುಂಬಕ್ಕೆ ಸೇರಿದ ಅರ್ಜುನ್ ನ ದುರಂತ ಅಂತ್ಯದಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ದುಃಖದ ನಡುವೆಯೂ ಅರ್ಜುನ್ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಆತನ ಕಣ್ಣುಗಳ ದಾನದಿಂದ ಇಬ್ಬರಿಗೆ ದೃಷ್ಟಿ ದೊರೆಯುವ ಅವಕಾಶ ಕಲ್ಪಿಸಿದಂತಾಗಿದೆ. ಯುವ ವಯಸ್ಸಿನಲ್ಲೇ ಅರ್ಜುನ್ ತೋರಿದ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ವರದಿ: ಮಂಜುಶ್ರವಣೂರು, ಹೊಳೆನರಸೀಪುರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
