ಪಾವಗಡ: ದೇಶಾದ್ಯಂತ ಭಾನುವಾರದಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಐದು ವರ್ಷದೊಳಗಿನ ಸುಮಾರು 17,000 ಸಾವಿರ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ ಎಂಬ ಮಾಹಿತಿ ತಾಲ್ಲೂಕು ವೈದ್ಯಾಧಿಕಾರಿ ಕಛೇರಿಯಿಂದ ತಿಳಿದು ಬಂದಿದೆ.
ಭಾರತವು ಈಗಾಗಲೇ ಪೋಲಿಯೋ ಮುಕ್ತ ದೇಶವಾಗಿದ್ದರೂ, ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಅಭಿಯಾನವನ್ನು ಮುಂದುವರೆಸಲಾಗುತ್ತಿದೆ.
ಬೂತ್ ಮತ್ತು ಮನೆ ಭೇಟಿ: ಡಿಸೆಂಬರ್ 21ರಂದು 174 ಲಸಿಕಾ ಕೇಂದ್ರಗಳಲ್ಲಿ (ಬೂತ್ ಗಳಲ್ಲಿ) ಹನಿ ಹಾಕಲಾಗಿದೆ. ನಂತರದ 2–3 ದಿನಗಳ ಕಾಲ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಬಿಟ್ಟುಹೋದ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ.
360 ಜನ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ, 17,286 ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಗುರಿಯಿದೆ, ಆರೋಗ್ಯ ಇಲಾಖೆ ಬಳಿ 19,000 ಮಕ್ಕಳಿಗೆ ಆಗುವಷ್ಟು ಲಸಿಕೆ ಲಭ್ಯವಿದೆ.
ವರದಿ: ನಂದೀಶ್ ನಾಯ್ಕ , ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


